ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸವನ್ನು ಕೈಗೊಂಡಿದ್ದು ಇಂದು (ಸೋಮವಾರ ಸಪ್ಟೆಂಬರ್ 01) ರಂದು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿಯವರನ್ನು ಮೈಸೂರಿನ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.
ನಂತರ ವಿಮಾನ ನಿಲ್ದಾಣದಿಂದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತೆರಳಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್: ತನಿಖೆಯನ್ನು ಎನ್ಐಎ ಅಥವಾ ಸಿಬಿಐಗೆ ವಹಿಸಬೇಕು: ಬಿವೈವಿ
ಈ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವರಾದ ಅನುಪ್ರಿಯಾ ಪಟೇಲ್, ಮೈಸೂರಿನ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವಗುಪ್ತ, ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.
