ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾತಿ ನಿಂದನೆ, ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ಸೇರಿದಂತೆ 6 ಕೃತ್ಯಗಳಲ್ಲಿ ಆರೋಪ ಎದುರಿಸುತ್ತಿದ್ದ ಮುನಿರತ್ನಗೆ ಸಿಐಡಿ, ಎಸ್ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದು, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ 3 ಪ್ರಕರಣಗಳಲ್ಲಿ ‘ಬಿ ರಿಪೋರ್ಟ್’ ಸಲ್ಲಿಸಿದ್ದಾರೆ.
ಹಾಗಾಗಿ 6 ಕೇಸಿಗೆ ಸಂಬಂಧಿಸಿದಂತೆ ಇದೀಗ ಮುನಿರತ್ನ ಅವರಿಗೆ ಮೂರು ಕೇಸಿನಲ್ಲಿ ಬಿಗ್ ರಿಲೀಸ್ ಸಿಕ್ಕಂತಾಗಿದೆ. ಅಲ್ಲದೆ ಅತ್ಯಾಚಾರ ಆರೋಪದ ಕೇಸಿನಿಂದ ಮುಕ್ತಿ ಪಡೆದಂತಾಗಿದೆ. 2025ರ ಮೇ 20 ರಂದು, ಸುಮಾರು 40 ವರ್ಷದ ಮಹಿಳೆ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮುನಿರತ್ನ ಹಾಗೂ ಅವರ ಬೆಂಬಲಿಗರು ಗ್ಯಾಂಗ್ ರೇಪ್ ನಡೆಸಿದ್ದಾರೆ ಎಂದು ಆರೋಪ ಮಾಡಲಾಗಿತ್ತು. ಇದನ್ನೂ ಓದಿ: ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ: ಡಿ.ಕೆ. ಸುರೇಶ್
ಈ ಸಂಬಂಧ ಎಫ್ಐಆರ್ ದಾಖಲಾಗಿದ್ದು, ಬಳಿಕ ಪ್ರಕರಣವನ್ನು ಸರ್ಕಾರ ಸಿಐಡಿ ಎಸ್ಐಟಿ ತನಿಖೆಗೆ ವಹಿಸಿತ್ತು. ಸುಮಾರು 5 ತಿಂಗಳ ಕಾಲ ತನಿಖೆ ನಡೆಸಿದ ಎಸ್ಐಟಿ ಅಧಿಕಾರಿಗಳು, ಸಾಕ್ಷ್ಯಾಧಾರಗಳು ದೊರಕದ ಕಾರಣ, ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ‘ಬಿ ರಿಪೋರ್ಟ್’ ಸಲ್ಲಿಸಿದ್ದಾರೆ.
