Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಿಎಸ್‌ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಿದ ಕೇಂದ್ರ ಸರ್ಕಾರ
  • Bangalore
  • Front news
  • National
  • State

ಜಿಎಸ್‌ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಿದ ಕೇಂದ್ರ ಸರ್ಕಾರ

admin September 4, 2025
Spread the love

ಬೆಂಗಳೂರು:  ಕೇಂದ್ರ ಸರ್ಕಾರವು ದೇಶದ ಜನತೆಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಜಿಎಸ್‌ಟಿಯಲ್ಲಿ ಭಾರಿ ಪರಿಷ್ಕರಣೆ ಮಾಡಲಾಗಿದೆ. ಇದೇ ಸೆ. 22 ರಿಂದ ಹೊಸ ತೆರಿಗೆ ಜಿಎಸ್‌ಟಿ ಸ್ಲ್ಯಾಬ್​ಗಳು ಜಾರಿಯಾಗಲಿದ್ದು, ದೇಶದ ಪ್ರತಿಯೊಬ್ಬ ನಾಗರಿಕನೂ ಪರೋಕ್ಷವಾಗಿ ಕಟ್ಟುವ ತೆರಿಗೆಯಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ.

ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ನೇತೃತ್ವದಲ್ಲಿ ನಿನ್ನೆ (ಬುಧವಾರ ಸೆ. 03) ನಡೆದ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಜಿಎಸ್‌ಟಿ ಪರಿಷ್ಕರಣೆ ಮಾಡಲಾಗಿದೆ. ಶೇಕಡಾ 28 ರಷ್ಟು ತೆರಿಗೆಯನ್ನು ಶೇ 18ಕ್ಕೆ ಇಳಿಸಲಾಗಿದೆ. ಹಾಗೆಯೇ ಶೇಕಡಾ 18 ಮತ್ತು 12ರ ತೆರಿಗೆಯನ್ನು ಶೇಕಡಾ 5ಕ್ಕೆ ಇಳಿಸಲಾಗಿದೆ. ಸಭೆಯಲ್ಲಿ ರಾಜ್ಯಗಳ ಅಭಿಪ್ರಾಯ ಪಡೆದು ಈ ನಿರ್ಧಾರ ಮಾಡಲಾಗಿದೆ.

ಮದ್ಯಮ ವರ್ಗ ಮತ್ತು ಬಡವರ್ಗದ ಬದುಕಿಗೆ ನೆರವು ನೀಡುವ ನಿಟ್ಟಿನಲ್ಲಿ, ದಿನಬಳಕೆಯ ವಸ್ತುಗಳ ದರವನ್ನು ತಗ್ಗಿಸುವ ನಿಟ್ಟಿನಲ್ಲಿ ಇದೊಂದು ಶ್ಲಾಘನಾರ್ಹ ಆರ್ಥಿಕ ಸುಧಾರಣಾ ಕ್ರಮ ಮಾಡಲಾಗಿದೆ. ಬಡ, ಮಧ್ಯಮ ವರ್ಗ ಅಷ್ಟೇ ಅಲ್ಲ ರೈತಾಪಿ ವರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದ ಕೇಂದ್ರ ಸರಕಾರ ಭಾರಿ ಕೊಡುಗೆ ಕೊಟ್ಟಿದೆ. ಇದನ್ನೂ ಓದಿ: ನಾಡಹಬ್ಬ ದಸರಾ ಉತ್ಸವಕ್ಕೆ ಡಿಕೆಶಿಗೆ ಆಹ್ವಾನ

ಶ್ಯಾಂಪೂ, ಫೇಸ್ ಪೌಡರ್ ಸೇರಿ, ಭಾರತೀಯ ಬ್ರೆಡ್, ಪಿಜ್ಜಾ, ರೊಟ್ಟಿ, ಪನ್ನೀರ್, ಕೆಲವು ಧಾನ್ಯಗಳ ಮೇಲಿನ ಜಿಎಸ್‌ಟಿ ಇಳಿಕೆ ಅತ್ಯುತ್ತಮ ಕ್ರಮ ಆಗಿದೆ. ರೈತರು ಬಳಸುವ ಟ್ರಾಕ್ಟರ್ ಸೇರಿ ಕೃಷಿ ಯಂತ್ರೋಪಕರಣದ ವಿಚಾರದಲ್ಲಂತೂ ದೊಡ್ಡ ಮಟ್ಟದಲ್ಲಿ ತೆರಿಗೆ ಕಡಿತ ಆಗಿ, ಸ್ಲಾಬ್ ಬದಲಾವಣೆ ಆಗಿದೆ.

ಅಲ್ಲದೆ ಔಷಧ ಮತ್ತು ವಿಮೆ ವಲಯದಲ್ಲಂತೂ ಭಾರಿ ಸುಧಾರಣೆ ಮಾಡಿ, ಆರೋಗ್ಯ ಕ್ಷೇತ್ರದ ವ್ಯವಸ್ಥೆಯ ದಿಕ್ಕನ್ನೇ ಕೇಂದ್ರ ಸರ್ಕಾರ ಬದಲಿಸಿದೆ. ಜೀವರಕ್ಷಕ ಔಷಧಿ ಸೇರಿ, ಇನ್ನಿತರೆ ಔಷಧಿಗಳ ತೆರಿಗೆಯನ್ನು ಶೇಕಡಾ 5 ರ ಸ್ಲಾಬ್ ವ್ಯಾಪ್ತಿಗೆ ತಂದು ಮಹತ್ವದ ಬದಲಾವಣೆ ಮಾಡಲಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ನಾಡಹಬ್ಬ ದಸರಾ ಉತ್ಸವಕ್ಕೆ ಡಿಕೆಶಿಗೆ ಆಹ್ವಾನ
Next: ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ಡಾರ್ಲಿಂಗ್ ಕೃಷ್ಣ..!

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.