ಬೆಂಗಳೂರು: ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸಿದ್ದ ನಟಿ ಮಿಲನಾ ನಾಗರಾಜ್ ಹಾಗೂ ನಟ ಡಾರ್ಲಿಂಗ್ ಕೃಷ್ಣ ಅವರು ಸ್ಯಾಂಡಲ್ ವುಡ್ ನ ಕ್ಯೂಟ್ ಜೋಡಿ ಎನಿಸಿಕೊಂಡಿದ್ದಾರೆ. ಅವರು 2021ರಲ್ಲಿ ಮದುವೆ ಆಗಿದ್ದು, ಈ ದಂಪತಿಗೆ ಒಂದು ಮುದ್ದಾದ ಹೆಣ್ಣು ಮಗು ಇದೆ. ಮಿಲನ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಅವರ ಸಂಸಾರದಲ್ಲಿ ಎಲ್ಲವೂ ಕೂಡ ಸರಿಯಾಗಿ ಇದೀಗ. ಆದರೆ ಡಾರ್ಲಿಂಗ್ ಕೃಷ್ಣ ಅವರು ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಯಾರಿಗೂ ಗುರುತು ಸಿಗಬಾರದು ಎಂಬ ಕಾರಣಕ್ಕೆ ಕೃಷ್ಣ ಅವರ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಫ್ಯಾಮಿಲಿ ಕೋರ್ಟ್ ನಲ್ಲಿ ಕಾಣಿಸಿಕೊಂಡಿರುವುದು ಅಚ್ಚರಿ ಎಂಬಂತಾಗಿದೆ.
ಅಂದಹಾಗೆ, ಡಾರ್ಲಿಂಗ್ ಕೃಷ್ಣ ಅವರು ಫ್ಯಾಮಿಲಿ ಕೋರ್ಟ್ನಲ್ಲಿ ಕಾಣಿಸಿಕೊಂಡಿರುವುದು ಸಿನಿಮಾ ಸಲುವಾಗಿ ಎನ್ನಲಾಗಿದೆ. ಇದನ್ನೂ ಓದಿ: ತಾಯಿ ಪಾತ್ರವನ್ನೇ ನಿರ್ವಹಿಸಲಿದ್ದಾರಾ ಜಾನ್ವಿ ಕಪೂರ್..?
ನಟನಾಗಿ ಮಾತ್ರವಲ್ಲದೇ ನಿರ್ದೇಶಕನಾಗಿ ಕೂಡ ಡಾರ್ಲಿಂಗ್ ಕೃಷ್ಣ ಅವರು ಫೇಮಸ್ ಆಗಿದ್ದಾರೆ. ‘ಲವ್ ಮಾಕ್ಟೇಲ್’, ‘ಲವ್ ಮಾಕ್ಟೇಲ್ 2’ ಸಿನಿಮಾಗಳನ್ನು ನಿರ್ದೇಶಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ಈಗ ಅವರ ನಿರ್ದೇಶನದಲ್ಲಿ ‘ಲವ್ ಮಾಕ್ಟೇಲ್ 3’ ಸಿನಿಮಾ ಕೂಡ ಸಿದ್ಧವಾಗುತ್ತಿದೆ. ಈ ಚಿತ್ರದಲ್ಲಿ ಫ್ಯಾಮಿಲಿ ಕೋರ್ಟ್ನ ದೃಶ್ಯಗಳು ಇರಲಿವೆ. ಹಾಗಾಗಿ ಫ್ಯಾಮಿಲಿ ಕೋರ್ಟ್ ಹೇಗಿರುತ್ತದೆ ಎಂಬುದನ್ನು ನೋಡಲು ಡಾರ್ಲಿಂಗ್ ಕೃಷ್ಣ ಅಲ್ಲಿಗೆ ತೆರಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
