Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಧರ್ಮಸ್ಥಳ ಬುರುಡೆ ಕೇಸ್; ಮತ್ತೊಬ್ಬ ಯುಟುಬರಿಗೆ ಎಸ್ಐಟಿ ನೋಟಿಸ್!
  • Bangalore
  • Crime
  • State

ಧರ್ಮಸ್ಥಳ ಬುರುಡೆ ಕೇಸ್; ಮತ್ತೊಬ್ಬ ಯುಟುಬರಿಗೆ ಎಸ್ಐಟಿ ನೋಟಿಸ್!

admin September 5, 2025 1 minute read
Spread the love

ಬೆಂಗಳೂರು: ಧರ್ಮಸ್ಥಳ ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಕೇವಲ ಕರ್ನಾಟಕ ರಾಜ್ಯ ಮಾತ್ರವಲ್ಲದೇ ಇಡೀ ದೇಶದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದು, ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ನಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುವ YouTuber ವಿರುದ್ಧ ಈಗಾಗಲೇ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಲ್ಲದೆ ಮತ್ತೆ ಇದೀಗ ಕೇರಳ ಮೂಲದ ಯೂಟ್ಯೂಬರ್ ಮನಾಫ್ ಎಂಬುವ ವ್ಯಕ್ತಿಗೆ ಎಸ್ಐಟಿ ನೋಟಿಸ್ ನೀಡಿದೆ.

ಹೌದು, ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್​​ನನ್ನು ಎಸ್ಐಟಿ ವಿಚಾರಣೆ ನಡೆಸಿದೆ. ಈ ಮಧ್ಯೆ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಕೇರಳ ಮೂಲದ ಯೂಟ್ಯೂಬರ್ ಮನಾಫ್​​ಗೂ ಎಸ್ಐಟಿ ನೋಟಿಸ್​ ನಿಡಿದೆ.

ಜಯಂತ್.ಟಿ ಮೂಲಕ ಬುರುಡೆ ಕಥೆಯನ್ನು ಕೇರಳಕ್ಕೂ ಹಬ್ಬಿಸಿದ್ದ. ಧರ್ಮಸ್ಥಳದಲ್ಲಿ ನೂರಾರು ಹೆಣ್ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡಿ ಹೂಳಲಾಗಿದೆ ಎಂದು ಪ್ರಚಾರ ಮಾಡಿದ್ದ. ಕಾಡಿನಿಂದ ಬುರುಡೆ ತಂದಿರುವ ಒರಿಜಿನಲ್ ವಿಡಿಯೋ ಮನಾಫ್ ಯುಟ್ಯೂಬ್​ನಲ್ಲಿ ಜುಲೈ 11 ರಂದು ಅಪ್ಲೋಡ್ ಆಗಿತ್ತು. ಇದನ್ನೂ ಓದಿ: ಡೈರೆಕ್ಟಾಗಿ ಮೋದಿಗೆ ಟಾಂಗ್ ಕೊಟ್ರಾ ಡಿಕೆಶಿ..?

ಬಂಗ್ಲೆಗುಡ್ಡೆಯಿಂದಲೇ ಬುರುಡೆ ತಂದಿರುವುದಾಗಿ ಜಯಂತ್.ಟಿ ಹೇಳಿದ್ದಾರೆ. ಕಾಡು ಪ್ರದೇಶದಲ್ಲಿ ಶೂಟ್ ಮಾಡಿರುವ ವಿಡಿಯೋ ಇದಾಗಿದ್ದು, ಮರಕ್ಕೆ ಸೀರೆ ಬಿಗಿದ ಸ್ಥಳದ ಪಕ್ಕದಲ್ಲೇ ಪತ್ತೆಯಾಗಿರುವ ಬುರುಡೆಯನ್ನ ಕತ್ತಿ ಮೂಲಕ ಎತ್ತಿಕೊಂಡು ತಂದಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಆ ಮೂಲಕ ಧರ್ಮಸ್ಥಳ ಭಾಗದಿಂದಲೇ ಬುರುಡೆ ಎತ್ತಿಕೊಂಡು ಬಂದಿರುವ ಅನುಮಾನ ವ್ಯಕ್ತವಾಗಿತ್ತು. ಹೀಗಾಗಿ ತನಿಖೆಗೆ ಹಾಜರಾಗುವಂತೆ ನೋಟಿಸ್ ಕೊಡಲಾಗಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಡೈರೆಕ್ಟಾಗಿ ಮೋದಿಗೆ ಟಾಂಗ್ ಕೊಟ್ರಾ ಡಿಕೆಶಿ..?
Next: ಒಂದೇ ತೆರೆ ಮೇಲೆ ಮತ್ತೆ ಒಂದಾದ ಕ್ಯೂಟ್ ಕಪಲ್ಸ್!

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.