ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಿಟಿ ರವಿ ಅವರು ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಪ್ರಚೋದನಕಾರಿ ಹೇಳಿಕೆಯನ್ನು ಹೇಳಿರುವುದರಿಂದ ಇದೀಗ ಸಿಟಿ ರವಿ ಅವರ ವಿರುದ್ಧ ದೂರು ದಾಖಲಾಗಿದೆ.
ಮಂಡ್ಯ: ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಿಟಿ ರವಿ ಅವರು ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಪ್ರಚೋದನಕಾರಿ ಹೇಳಿಕೆಯನ್ನು ಹೇಳಿರುವುದರಿಂದ ಇದೀಗ ಸಿಟಿ ರವಿ ಅವರ ವಿರುದ್ಧ ದೂರು ದಾಖಲಾಗಿದೆ.
ಹೌದು, ನಿನ್ನೆ ಮದ್ದೂರು ಪಟ್ಟಣದಲ್ಲಿ ಬಿಜೆಪಿ ಪಕ್ಷವು ಸಾಮೂಹಿಕ ಗಣೇಶ ವಿಸರ್ಜನೆಗೆ ಕರೆ ನೀಡಿದ್ದು, ಅದರಂತೆ ನಿನ್ನೆ (ಬುಧವಾರ ಸೆಪ್ಟೆಂಬರ್ 10) ರಂದು ಬಿಜೆಪಿ ನಾಯಕರು ಸಾಮೂಹಿಕ ಗಣೇಶ ವಿಸರ್ಜನೆಯಲ್ಲಿ ಭಾಗಿಯಾಗಿದ್ದರು.
ಇನ್ನು ಈ ಸಾಮೂಹಿಕ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮಾಜಿ ಸಚಿವ ಸಿಟಿ ರವಿ ಅವರು ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆಯನ್ನು ಹೇಳಿರುವುದರಿಂದ ಇದೀಗ ಸಿಟಿ ರವಿ ಅವರ ವಿರುದ್ಧ ಕೇಸ್ ದಾಖಲಾಗಿದ್ದು, ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ.
ಅನ್ಯ ಸಮುದಾಯಗಳ ಮಧ್ಯೆ ದ್ವೇಷ ಉಂಟುಮಾಡುವ ಮತ್ತು ಸೌಹಾರ್ದತಾ ಭಾವನೆಗಳಿಗೆ ಭಾದಕವಾಗುವಂತೆ, ವೈರತ್ವ, ದ್ವೇಷ ಉಂಟಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿ ಪ್ರಕರಣ ದಾಖಲಾಗಿದೆ.
