ಬೆಂಗಳೂರು: ನಗರದ ವಿಧಾನಸೌಧ ಆವರಣದಲ್ಲಿ ಕರ್ನಾಟಕ ವಿಧಾನಸಭೆ ಸಚಿವಾಲಯ ಆಯೋಜಿಸಿದ್ದ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಿಭಾಗದ 11ನೇ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲಕೋಟಿಯನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಲೋಕಸಭಾ ಉಪ ಸಭಾಧ್ಯಕ್ಷ ಹರಿವಂಶ್, ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್, ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾನೂನು ಸಚಿವ ಎಚ್. ಕೆ. ಪಾಟೀಲ್ ಉಪಸ್ಥಿತರಿದ್ದರು.
