ಜಗದೀಪ್ ಧನಕರ್ ರಾಜೀನಾಮೆ ನೀಡಿದ ಬಳಿಕ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ
ದೆಹಲಿ: ಭಾರತ ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸಪ್ಟಂಬರ್ 12) ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಪ್ರಮಾಣವಚನ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಗಮಿತ ರಾಜ್ಯಪಾಲರಾದ ಜಗದೀಪ್ ಧನ್ಕರ್ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 10ಗಂಟೆ ಸುಮಾರು ಪ್ರಮಾಣ ವಚನ ಸ್ವೀಕರಿಸಿದರು. ಜಗದೀಪ್ ಧನಕರ್ ರಾಜೀನಾಮೆ ನೀಡಿದ ಬಳಿಕ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
ಇನ್ನು ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದರು. ರಾಧಾಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನ ಪಡೆದು ಗೆಲುವು ಸಾಧಿಸಿದ್ರೆ, ಪ್ರತಿಸ್ಪರ್ಧಿ ಸುರ್ದಶನ್ ರೆಡ್ಡಿ 300 ಮತಗಳನ್ನು ಪಡೆದು ಪರಾಭವಗೊಂಡಿದ್ದರು.
