ಮಂಡ್ಯ: ಮದ್ದೂರು ಪಟ್ಟಣದಲ್ಲಿ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಅವಹೇಳನಕಾರಿ ಭಾಷಣ ಮಾಡಿರುವುದರಿಂದ ಈಗಾಗಲೇ ಸಿಟಿ ರವಿ ಅವರ ವಿರುದ್ಧ ದೂರು ದಾಖಲಾಗಿದ್ದು, ಮತ್ತೆ ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೌದು, ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು (ಗುರುವಾರ ಸೆ.11) ಸಾಮೂಹಿಕ ಗಣೇಶ ವಿಸರ್ಜನೆಗೆ ಕರೆ ನೀಡಿದರು. ಅಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮದ್ದೂರು ಪೊಲೀಸ್ ಸಬ್ಇನ್ಸ್ಪೆಕ್ಟರ್ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ.
ಬಿಎನ್ಎಸ್ ಸೆಕ್ಷನ್ 196(1)(ಚಿ), 299, 353(2) ಅನ್ಯಕೋಮಿಗೆ ಧಕ್ಕೆ ಹಾಗೂ ಕೋಮುಗಳ ನಡುವೆ ವೈರತ್ವ ಉಂಟುಮಾಡುವ ಭಾಷಣ ಮಾಡಿರುವ ಆರೋಪದಡಿ ಎಫ್ಐಆರ್ ದಾಖಲಾಗಿದೆ.
