ಬೆಂಗಳೂರು: ಯಾವುದೇ ಸೆಲೆಬ್ರಿಟಿಗಳಾಗಲಿ ಅವರು ತಮ್ಮದೇ ಆದ ಸೋಶಿಯಲ್ ಮೀಡಿಯಾ ಖಾತೆಗಳನ್ನು ಹೊಂದಿರುತ್ತಾರೆ. ಸಿನಿಮಾ ಬಿಡುಗಡೆ, ಸಿನಿಮಾ ಪ್ರಮೋಷನ್, ಹಾಗೂ ತಮ್ಮ ವೈಯಕ್ತಿಕ ಜೀವನಕ್ಕೂ ಸಂಬಂಧಿಸಿದಂತೆ ಫೋಟೋ, ವಿಡಿಯೋ ಹೀಗೆ ಹಲವಾರು ರೀತಿ ಸಂಗತಿಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದು ಸರ್ವೇಸಾಮಾನ್ಯ.
ಆದರೆ ಇದೀಗ ತೆಲುಗು ಚಿತ್ರರಂಗದ ಖ್ಯಾತ ನಟಿ ಒಬ್ಬರು ಸೋಶಿಯಲ್ ಮೀಡಿಯಾದಿಂದ ದೂರ ಉಳಿಯುವುದಾಗಿ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯನ್ನು ನೀಡಿದ್ದಾರೆ.
ಹೌದು, ತೆಲುಗು ಚಿತ್ರರಂಗದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರು ಇತ್ತೀಚಿಗಷ್ಟೇ ಘಾಟಿ ಸಿನಿಮಾದ ಮೂಲಕ ಮತ್ತಷ್ಟು ಅಭಿಮಾನಿಗಳನ್ನ ಗಳಿಸಿರುವ ಅವರು ಇದೀಗ ಸೋಶಿಯಲ್ ಮೀಡಿಯಾದಿಂದ ದೂರ ಉಳಿಯುವುದಾಗಿ ಪತ್ರ ಬರೆದು ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯನ್ನು ನೀಡಿದ್ದಾರೆ.
ಇನ್ನು ಬೇರೆ ನಟಿಯರಿಗೆ ಹೋಲಿಸಿದರೆ ಅನುಷ್ಕಾ ಶೆಟ್ಟಿ ಸೋಶಿಯಲ್ ಮೀಡಿಯಾಗಳಿಂದ ಅಂತರ ಕಾಯ್ದುಕೊಂಡೇ ಬಂದವರು. ಸಿನಿಮಾಗೆ ಸಂಬಂಧಪಟ್ಟ ಮಾಹಿತಿಯನ್ನಷ್ಟೇ ಆಗಾಗ ಹಂಚಿಕೊಳ್ಳುತ್ತಿದ್ದರು. ವೈಯಕ್ತಿಕ ಪೋಸ್ಟ್ ಹಾಕುವುದು ಕಡಿಮೆ. ಇದೀಗ ಸೋಶಿಯಲ್ ಮೀಡಿಯಾದಿಂದ ದೂರಾಗುವ ಕುರಿತು ಮಾಹಿತಿ ಹಂಚಿಕೊಂಡಿರುವ ಅನುಷ್ಕಾ “ಸೋಶಿಯಲ್ ಮೀಡಿಯಾದಿಂದ ಸ್ವಲ್ಪ ದೂರ ಸರಿಯುತ್ತಿದ್ದೇನೆ. ಮೊಬೈಲ್ ಸ್ಕ್ರೋಲಿಂಗ್ ಹೊರತಾಗಿಯೂ ಜಗತ್ತಿನ ಜೊತೆ ಸಂಪರ್ಕ ಸಾಧಿಸಬೇಕಾಗಿದೆ.” ಶೀಘ್ರದಲ್ಲೇ ಮತ್ತೆ ನಿಮ್ಮೊಂದಿಗೆ ಸೇರಿಕೊಳ್ಳುತ್ತೇನೆ ಎಂದು ಬರೆದಿದ್ದಾರೆ.
