ಹಾಸನ: ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೌದು, ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತವೊಂದು ಸಂಭವಿಸಿದೆ. ಗಣೇಶ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಏಕಾಏಕಿ ಟ್ರಕ್ ಹರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ:ತಾಳಿದವನು ಬಾಳಿಯಾನು ಎಂಬ ಮಾತು ನನ್ನ ಜೀವನದಲ್ಲಿ ನಿಜವಾಗಿದೆ: ಅನುಶ್ರೀ
ಇನ್ನು ಮೊಸಳೆಹೊಸಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ 25 ವರ್ಷಗಳಿಂದ ಗ್ರಾಮಸ್ತರು ಗಣಪತಿ ಕೂರಿಸುತ್ತಿದ್ದಾರೆ. ಇಂದು (ಶನಿವಾರ ಸೆ. 13) ಆರ್ಕೆಸ್ಟ್ರಾ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಆರ್ಕೆಸ್ಟ್ರಾ ಬಳಿಗೆ ಸಾವಿರಾರು ಮಂದಿ ಬರುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಯಮಸ್ವರೂಪಿ ಟ್ರಕ್ ಹರಿದು ದುರಂತ ಸಂಭವಿಸಿದೆ.
