Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಾಸನದ ಘೋರದುರಂತದ ಬಗ್ಗೆ ಕೃಷ್ಣ ಬೈರೇಗೌಡ ಹೇಳಿದ್ದೇನೆ?
  • Crime
  • Politics
  • State

ಹಾಸನದ ಘೋರದುರಂತದ ಬಗ್ಗೆ ಕೃಷ್ಣ ಬೈರೇಗೌಡ ಹೇಳಿದ್ದೇನೆ?

Praja Vahini September 13, 2025 1 minute read
WhatsApp Image 2025-09-13 at 15.59.20
Spread the love

ಹಾಸನ: ಹಾಸನದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಘೋರ ದುರಂತ ಒಂದು ನಡೆದಿದ್ದು, ಈ ದುರಂತದಲ್ಲಿ 20 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು ಇದರಲ್ಲಿ 9 ಜನ ಮೃತಪಟ್ಟಿದ್ದಾರೆ ಎಂದು  ತಿಳಿದು ಬಂದಿದೆ.

ಇನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವಂತ ಕೃಷ್ಣಭೈರೇಗೌಡ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೃದಯ ವಿದ್ರಾವಕ ಘಟನೆ ನಡೆದಿದೆ. ಅವಘಡದಲ್ಲಿ ಈವರೆಗೆ 9 ಜನ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದ ಪರವಾಗಿ ಸಾಂತ್ವನ ಹೇಳಿದ್ದೇನೆ. ಆ ಕುಟುಂಬದ ನೋವು ಅರ್ಥ ಮಾಡಿಕೊಳ್ಳೋದು ಕಷ್ಟ. ಮೃತರ ಕುಟುಂಬಗಳಿಗೆ ನಷ್ಟ ಭರಿಸಲು ಆಗಲ್ಲ, ಹೀಗಾಗಿ ಸ್ವಲ್ಪ ಸಹಾಯದ ರೀತಿಯಲ್ಲಿ ಪರಿಹಾರ ನೀಡಿದ್ದೇವೆ. ತಲಾ 5 ಲಕ್ಷ ರೂ. ಪರಿಹಾರ ಕೊಡುವಂತೆ ಸಿಎಂ ಸೂಚಿಸಿದ್ದಾರೆ. ಅದರಂತೆ ನಾನು 5 ಲಕ್ಷ ರೂ. ಪರಿಹಾರ ಕೊಡುತ್ತಿದ್ದೇನೆ. ಇನ್ನೂ ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆ. ಅದರ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಇದು ಯಾರ ವೈಫಲ್ಯ ಎಂದು ಹೇಳೊಕ್ಕಾಗಲ್ಲ. ಹೆಚ್ಚಿನ ಭದ್ರತೆ ನೀಡಿದರೆ ಜನರ ಭಾವನೆಗಳಿಗೆ ಧಕ್ಕೆ ಎನ್ನುತ್ತೀರಾ, ಭದ್ರತೆ ಕಡಿಮೆ ಮಾಡಿದಾಗ ಏನಾದರೂ ಆದರೆ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎನ್ನುತ್ತೀರಾ. ಹೀಗಾಗಿ ವೈಫಲ್ಯದ ಬಗ್ಗೆ ನಾನು ಮಾತಾಡಲ್ಲ. ಈಗಾಗಲೇ ಟ್ರಕ್ ಚಾಲಕನನ್ನು ಬಂಧಿಸಿದ್ದೇವೆ. ಆತ ಇದೇ ಊರಿನವನು, ಅವನಿಗೂ ಗಾಯ ಆಗಿದೆ. ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡುವ ಮುನ್ನ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಸ್ಥಳ ಪರಿಶೀಲನೆ ಕೂಡ ಮಾಡಿದ್ದೇನೆ. ಕೆಲವು ಕುಟುಂಬಗಳ ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ. ಗಾಯಾಳುಗಳ ಆರೈಕೆ ಬಗ್ಗೆಯೂ ವಿಚಾರಿಸಿದ್ದೇನೆ. ಪೊಲೀಸರಿಗೆ ದುರಂತ ಹೇಗಾಯ್ತು ಹಾಗೂ ಡ್ರೈವರ್ ಬಗ್ಗೆ ತನಿಖೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ದರ್ಶನ್‌ ಮನೆಯಲ್ಲಿ ಕಳ್ಳತನ
Next: ಬೆಂಗಳೂರು ನಗರವಾಸಿಗಳೇ ಗಮನಿಸಿ; ಇಂದಿನಿಂದ 3 ದಿನ ಕಾವೇರಿ ನೀರು ಬಂದ್

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.