ಬೆಂಗಳೂರು: ಇತ್ತೀಚಿನ ದಿನಗಳಲ್ಲಿ KSRTC ಬಸ್ ಹಾಗೂ BMTC ಬಸ್ ಗಳಲ್ಲಿ ಬೆಂಕಿ ಅವಘಡ ಸಂಭವಿಸುತ್ತಿರುವುದು ಹೆಚ್ಚಾಗಿ ಕಂಡು ಕಂಡುಬರುತ್ತಿದೆ.
ಹೌದು, ಬಿಎಂಟಿಸಿ ಬಸ್ ನಲ್ಲಿ ಇತ್ತೀಚಿಗೆ ಬೆಂಕಿ ಅವಘಡಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಮತ್ತೆ ಇದೀಗ ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಉರಿದು ಸುಟ್ಟು ಕರಕಲಾಗಿದೆ
ಬೆಳಗ್ಗಿನ ಜಾವ 5:10ಕ್ಕೆ ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅಗ್ನಿ ದುರಂತ ಸಂಭವಿಸಿದೆ. ದುರಂತಕ್ಕೀಡಾದ ಬಸ್ (ಸಂಖ್ಯೆ KA57 F 4568) ಮೆಜೆಸ್ಟಿಕ್ನಿಂದ ಕಾಡುಗೋಡಿಗೆ ತೆರಳುತ್ತಿತ್ತು.
ಬಸ್ ಚಲಿಸುತ್ತಿದ್ದಂತೆ ಎಂಜಿನ್ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಚಾಲಕ, ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಕ್ರಮೇಣ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಬಸ್ ಧಗಧಗಿಸಿದೆ. ಚಾಲಕನ ಸಮಯಪ್ರಜ್ಷೆಯಿಂದ 75 ಪ್ರಯಾಣಿಕರು ಸೇಫ್ ಆಗಿದ್ದಾರೆ.
ಬಳಿಕ ಹೆಚ್ಎಲ್ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಎಂಟಿಸಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಪತ್ತೆ ಹಚ್ಚಲು ಮುಂದಾಗಿದೆ.
