ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲಿಂದಲೂ ವಿಪಕ್ಷ ಕ್ಷೇತ್ರಗಳಿಗೆ ಅಭಿವೃದ್ಧಿಪಡಿಸಲು ಯಾವುದೇ ರೀತಿ ಹಣ ನೀಡದಿದ್ದ ಕಾರಣಕ್ಕೆ ವಿಪಕ್ಷೇತ್ರಗಳ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಬೆನ್ನಲ್ಲೇ ಇದೀಗ ವಿಪಕ್ಷ ಕ್ಷೇತ್ರಗಳಿಗೂ ಅಭಿವೃದ್ಧಿಗೆಂದು ತಲಾ 25 ಕೋಟಿ ರಿಲೀಸ್ ಮಾಡಲು ಸಿದ್ಧರಾಮಯ್ಯ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ತಲಾ 25 ಕೋಟಿಯಂತೆ ಅನುದಾನ ರಿಲೀಸ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸಿಎಂ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಹಿಂದೆ ಕಾಂಗ್ರೆಸ್ ಶಾಸಕರಿಗೆ ಮಾತ್ರ 50 ಕೋಟಿ ರೂ. ಅನುದಾನ ಸಿಎಂ ರಿಲೀಸ್ ಮಾಡಿದ್ದರು. ಇದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಅಧಿವೇಶನದಲ್ಲಿ ಈ ಬಗ್ಗೆ ವಿಪಕ್ಷಗಳು ವಿರೋಧ ಮಾಡಿದ್ದವು. ಇದೀಗ ವಿಪಕ್ಷಗಳ ಶಾಸಕರಿಗೂ ಸಿಎಂ ಅನುದಾನ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿಯವರಿಗೆ ನಾಚಿಕೆ, ಮಾನ-ಮರ್ಯಾದೆ ಇಲ್ಲ: ಸಂತೋಷ್ ಲಾಡ್
ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಅಡಿ ಬರುವ ರಸ್ತೆ, ಸೇತುವೆ ಹಾಗೂ ನಗರಾಭಿವೃದ್ಧಿ ಇಲಾಖೆ ಅಡಿ ಬರೋ ನಗರ ಪ್ರದೇಶ ಕಾಮಗಾರಿಗಳಿಗೆ 18.75 ಕೋಟಿ ರೂ. ಬಿಡುಗಡೆ ಹಾಗೂ ವಿವೇಚನಾಧಿಕಾರದಡಿ ವಿಧಾನಸಭೆ ಸದಸ್ಯರು ಆಯ್ಕೆ ಮಾಡಬಹುದಾದ ಇತರ ಇಲಾಖೆ ಕಾಮಗಾರಿಗಳಿಗೆ 6.25 ಕೋಟಿ ರೂ. ಬಿಡುಗಡೆ ಸೇರಿ ಒಟ್ಟು 25 ಕೋಟಿ ರೂ. ಅನುದಾನ ಬಿಡುಗಡೆಗೆ ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
