ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿರುವ ಯಾವುದೇ ಅರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದಿಲ್ಲ ಅವುಗಳನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಅವರು ಹೇಳಿದ್ದಾರೆ.
ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದಿಲ್ಲ ಬದಲಾಗಿ ಅವುಗಳನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ ಎಪಿಎಲ್ ಗೆ ವರ್ಗಾವಣೆ ಮಾಡುತ್ತೇವೆ ಯಾವ ಕಾರ್ಡನ್ನು ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಿಪಕ್ಷ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿದ ಸಿಎಂ ಸಿದ್ದು
ಇನ್ನು ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
