ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 75ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟು ಹಬ್ಬದ ಸಂಭ್ರಮವನ್ನು ಅವರ ಅಭಿಮಾನಿಗಳು ಸೇರಿದಂತೆ ಇನ್ನೂ ಹಲವರು ಮೋದಿಯವರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.
ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ದೇಶದಲ್ಲೆಡೆ ವಿವಿಧ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಳ್ಳಲಾಗಿದ್ದು ಅದರಂತೆ ಕೇಂದ್ರ ಸಚಿವ ಪ್ರಹಲ್ಲಾ ಜೋಶಿ ಅವರು ಕೂಡ ಸ್ವಚ್ಛ ಭಾರತ್ ಅಭಿಯಾನ ಕಾರ್ಯಕ್ರಮದಲ್ಲಿ ಭಾಗಿಯಾದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಸ್ವಚ್ಛತೆಯ ಮಹತ್ವವನ್ನು ಸಾರಿ, ದೇಶದೆಲ್ಲೆಡೆ ‘ಸ್ವಚ್ಛ ಭಾರತ್’ ಅಭಿಯಾನಕ್ಕೆ ಚಾಲನೆ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ಹುಬ್ಬಳ್ಳಿಯ ಶ್ರೀ ಸಿದ್ದಾರೂಡ ಸ್ವಾಮೀಜಿ ರೈಲ್ವೆ ನಿಲ್ದಾಣದದಲ್ಲಿ ನೈಋತ್ಯ ರೈಲ್ವೆ ವಲಯದವರು ಆಯೋಜಿಸಿದ್ದ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸ್ವಚ್ಛತಾ ಹೀ ಸೇವಾ ಅಂಗವಾಗಿ ನಡೆಯುತ್ತಿರುವ ಸ್ವಚ್ಛ ಭಾರತ್ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು. ಇದನ್ನೂ ಓದಿ: ಭಿನ್ನಾಭಿಪ್ರಾಯಗಳ ಬಿಟ್ಟು ಮೋದಿಗೆ ಬರ್ತಡೇ ವಿಶ್ ಮಾಡಿದ ಟ್ರಂಪ್
ಈ ಸಂದರ್ಭದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ, ಬಿಜೆಪಿಯ ಪದಾಧಿಕಾರಿಗಳು, ಪಾಲಿಕೆಯ ಸದಸ್ಯರು, ಕಾರ್ಯಕರ್ತರು ಹಾಗೂ ಹುಬ್ಬಳ್ಳಿಯ ನೈಋತ್ಯ ವಲಯದ ರೈಲ್ವೆ ಜನರಲ್ ಮ್ಯಾನೇಜರ್, ಡಿಆರ್ಎಂ, ರೈಲ್ವೆ ಹಿರಿಯ ಅಧಿಕಾರಿಗಳು, ಸೇರಿದಂತೆ ಸ್ಥಳೀಯರು, ಗಣ್ಯರು,ಪೌರಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
