ಬೆಂಗಳೂರು: ಇತ್ತೀಚಿಗೆ ತಂತ್ರಜ್ಞಾನ ಮುಂದುವರೆದಷ್ಟು ಸೈಬರ್ ಕ್ರೈಂ ಗಳ ಸಂಖ್ಯೆ ಹೆಚ್ಚಾಗುತ್ತಿದೆ ಅದಕ್ಕೆ ಉದಾಹರಣೆ ಎಂಬಂತೆ ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ದೂರು ದಾಖಲಿಸಿದ್ದರು. ಅಲ್ಲದೆ ಮತ್ತೆ ಇದೀಗ ಮಾಜಿ ಸಿಎಂ ಸದಾನಂದ ಗೌಡ ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಸುಮಾರು ಮೂರು ಲಕ್ಷ ಸೈಬರ್ ಕಳ್ಳರು ದೋಚಿದ್ದಾರೆ ಎಂದು ತಿಳಿದುಬಂದಿದೆ.
ಹೌದು, ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ. ಇದನ್ನೂ ಓದಿ: ಮರಳು ಕಲಾಕೃತಿಯಲ್ಲಿ ಅರಳಿದ ಮೋದಿ
ಈ ಕುರಿತು ಸ್ವತಃ ಅವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದಾರೆ. ನಿನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ ಎಂದು ತಿಳಿಸಿದರು. ಹೆಚ್ಡಿಎಫ್ಸಿ, ಎಸ್ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ ಗೆ ದೂರು ನೀಡುತ್ತೇನೆ ಎಂದು ಹೇಳಿದರು.
