ಬೆಂಗಳೂರು: ಕೇವಲ ಕರ್ನಾಟಕ ರಾಜ್ಯ ಮಾತ್ರವಲ್ಲದೆ ಇಡೀ ದೇಶದಾದ್ಯಂತ ಮತಗಳ್ಳತನ ನಡೆದಿದೆ ಎಂದು ಸಾರಿಗೆ ಸಚಿವರಾಗಿರುವಂತಹ ರಾಮಲಿಂಗ ರೆಡ್ಡಿ ಅವರು ಕಿರಿಕರಿದ್ದಾರೆ.
ಈ ಕುರಿತು ಇಂದು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ವೇಳೆ 3ನೇ ಎಲೆಕ್ಷನ್ ಆಗುವ ಹೊತ್ತಿಗೆ ಬಿಜೆಪಿಯವರ ಪಾಪ್ಯುಲಾರಿಟಿ ಕಡಿಮೆ ಆಯಿತು. ಹೀಗಾಗಿ ಗೆಲ್ಲೋಕೆ ದೇಶದ ಎಲ್ಲಾ ಭಾಗದಲ್ಲಿ ಮತ ತೆಗೆಯೋ ಕೆಲಸ ಮಾಡಿದರು. ಮಹದೇವಪುರ, ಆಳಂದ ಸೇರಿ ಹಲವು ಕಡೆ ಹೀಗೆ ಮಾಡಿದ್ದಾರೆ. ಬಿಜೆಪಿ ಅವರು ಅಧಿಕಾರ ಇರುವ ಕಡೆ ವಿಪಕ್ಷಗಳ ಕ್ಷೇತ್ರದ ಕಡೆ ಜಾಸ್ತಿ ಮಾಡಿದ್ದಾರೆ. ಇಂತಹ ಮತ ಅಕ್ರಮ ದೇಶದಲ್ಲಿ ವ್ಯಾಪಕವಾಗಿ ನಡೆಯುತ್ತಿದೆ. ಎಲೆಕ್ಷನ್ ಕಮಿಷನ್ ಕೇಂದ್ರದ ಕೈಗೊಂಬೆಯಾಗಿದೆ. ನಮಗೆ ಕಮಿಷನ್ನಿಂದ ನ್ಯಾಯ ಸಿಗುವ ಭರವಸೆ ಇಲ್ಲ. ಸುಪ್ರೀಂಕೋರ್ಟ್ಗೆ ಹೋಗಬೇಕು ಅಷ್ಟೆ ಎಂದು ತಿಳಿಸಿದರು.
