Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ: ಸಿಎಂ
  • Bangalore
  • Politics
  • State

ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ: ಸಿಎಂ

Praja Vahini September 19, 2025 1 minute read
WhatsApp Image 2025-09-19 at 14.16.11
Spread the love

ಬೆಂಗಳೂರು: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024 ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017 ರಿಂದ 2023 ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಧ್ಯಮಗಳು ಸತ್ಯ ಅಸತ್ಯದ ಶೋಧನೆ ನಡೆಸಬೇಕು. ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಊಹಾ ಪತ್ರಿಕೋದ್ಯಮ ಆಗಿರುತ್ತದೆ, ಅದು ಆಗಬಾರದು. ಸತ್ಯ ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಯಾವುದೇ ಕಾರಣಕ್ಕೂ ಒಬ್ಬ ವ್ಯಕ್ತಿಯು ತಪ್ಪು ಮಾಡದಿದ್ದರೂ, ಸುಮ್ಮನೆ ಆರೋಪಗಳನ್ನು ಮಾಡಬಾರದು. ಸರ್ಕಾರದಲ್ಲಿ ಎಲ್ಲವೂ ಸರಿಯಾಗಿರುವುದಿಲ್ಲ ನಿಜ, ಆದರೆ ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.

ಸಮಾನ ಅವಕಾಶಗಳ ಮಹತ್ವ ಬಗ್ಗೆ ಜನರಲ್ಲಿ ಅರಿವು

ಸಮಾಜದಲ್ಲಿ ಜಾತಿ ವ್ಯವಸ್ಥೆ, ಅಸಮಾನತೆ ಇದೆ. ಸಾಮಾಜಿಕ ಅಸಮಾನತೆ ಬಗ್ಗೆ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಬಹುಸಂಖ್ಯಾತರಾಗಿರುವ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವುದು ಅಸಮಾನತೆಗೆ ಪ್ರಮುಖ ಕಾರಣ. ಇದನ್ನು ನೇರವಾಗಿ ಜನರಿಗೆ ತಿಳಿಸುವ ಪ್ರಯತ್ನದಲ್ಲಿ, ಯಾವುದೇ ರಾಜಿ ಇಲ್ಲದೆ, ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಕ್ಕಿದೆಯೇ, ಇಲ್ಲವೇ, ಸಮಬಾಳು, ಸಮಪಾಲು ಅನುಷ್ಠಾನಕ್ಕೆ ಬಂದಿದೆಯೇ ಎಂಬುದನ್ನು ಪರಿಶೀಲಿಸಬೇಕು. ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮ ಮಾಡಬೇಕು ಎಂದರು. ಇದನ್ನೂ ಓದಿ: 28 ಹೊರ ಗುತ್ತಿಗೆ ದಿನಗೂಲಿ ನೌಕರರನ್ನು ಮರು ನೇಮಕ ಮಾಡಿ

ದಸರಾ- ಸಾಂಸ್ಕೃತಿಕ ನಾಡ ಹಬ್ಬ
ಇತ್ತೀಚಿಗೆ ಟಿವಿ ಚಾನೆಲ್‌ಗಳು ಇನ್ನೊಬ್ಬರ ಹೇಳಿಕೆ ಬಗ್ಗೆ ಪ್ರತಿಕ್ರಿಯೆಯನ್ನು ಕೇಳಿ ಸುದ್ದಿ ಮಾಡುತ್ತವೆ. ಅದರಲ್ಲಿ ಅನೇಕ ವಿಚಾರಗಳು ಸಮಾಜಕ್ಕೆ ಸಂಬಂಧವೇ ಪಟ್ಟಿರುವುದಿಲ್ಲ. ಸಮಾಜಕ್ಕೆ ಸಂಬಂಧಪಟ್ಟಂತಹ ವಿಚಾರಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ. ಭಾನು ಮುಷ್ತಾಕ್‌ ದಸರಾ ಉದ್ಘಾಟನೆಯನ್ನು ವಿಷಯವನ್ನಾಗಿಸಲು ಹೊರಟರು. ಹೈಕೋರ್ಟ್‌ ಮತ್ತು ಸುಪ್ರಿಂಕೋರ್ಟ್‌ ಸಹ ಇದನ್ನು ವಜಾಗೊಳಿಸಿದೆ. ದಸರಾ ಹಬ್ಬ ಧಾರ್ಮಿಕ ವಿಚಾರವಲ್ಲ, ಅದು ನಾಡ ಹಬ್ಬವಾಗಿದ್ದು, ಸಾಂಸ್ಕೃತಿಕ ವಿಚಾರವಾಗಿದೆ. ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಮಾಜದಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ನಿರ್ಮಾಣ ಮಾಡಬೇಕು. ಅಂಬೇಡ್ಕರ್ ಅವರು ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ನಾವು ವೈರುಧ್ಯಗಳಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಮಾಜದ ದುರ್ಬಲ ವರ್ಗದವರ ಅಭಿವೃದ್ಧಿಯಾದರೆ ಮಾತ್ರ ನಿಜವಾದ ಅಭಿವೃದ್ಧಿ ಎಂದು ಹೇಳಿದ್ದರು.

ಸಮಸಮಾಜದ ಕನಸು ಕಂಡ ಪರ್ತಕರ್ತ

ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು ಎಂದು ವಿವರಿಸಿದರು. ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು. ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು. ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು. ಸ್ವಾತಂತ್ರ್ಯ ಪೂರ್ವದ ಮಾಧ್ಯಮ ರಂಗಕ್ಕೂ ಇಂದಿನ ಮಾಧ್ಯಮ ರಂಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಸ್ವಾತಂತ್ರ್ಯೋತ್ತರ ಪತ್ರಿಕೋದ್ಯಮ ಶ್ರೀಮಂತರ ಕೈಗಳಿಗೆ ಸಿಕ್ಕಿಹಾಕಿಕೊಂಡಿದೆ. ಪತ್ರಕರ್ತರು ಇದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕಿದೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: 28 ಹೊರ ಗುತ್ತಿಗೆ ದಿನಗೂಲಿ ನೌಕರರನ್ನು ಮರು ನೇಮಕ ಮಾಡಿ
Next: ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ 

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.