Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಿಕ್ಷಣ ಸಂಘಟನೆ ಹೋರಾಟ ಅಂಬೇಡ್ಕರ್ ಅವರು ಕೊಟ್ಟ ಮಂತ್ರ: ಸಿಎಂ
  • Uncategorized

ಶಿಕ್ಷಣ ಸಂಘಟನೆ ಹೋರಾಟ ಅಂಬೇಡ್ಕರ್ ಅವರು ಕೊಟ್ಟ ಮಂತ್ರ: ಸಿಎಂ

Praja Vahini September 20, 2025 1 minute read
WhatsApp Image 2025-09-20 at 18.32.07
Spread the love

ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು ಎಂದು ಪ್ರಶ್ನಿಸಿದರು.‌

ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧವಿದ್ದಾರೆ. ಇವರು ಹಿಂದುಳಿದವರ ಮನೆಯ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರುವುದನ್ನು ಸಹಿಸುವುದಿಲ್ಲ. ಹೀಗಾಗಿ ದೇವರು, ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಗಳ ಮನೆಯ ಮಕ್ಕಳನ್ನೇ ಬಲಿ ಆಗುವಂತೆ ಮಾಡುತ್ತಿದ್ದಾರೆ. ಆದ್ದರಿಂದ ಹಿಂದುಳಿದವರ ಮಕ್ಕಳನ್ನು ಬಲಿ ಕೊಡುವವರ ಮಾತು ಕೇಳಿಕೊಂಡು ನಾವು ತಲೆ ಆಡಿಸುತ್ತಾ ಕೂರಬಾರದು ಎಂದು ಕರೆ ನೀಡಿದರು.

ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದು ಅಂಬೇಡ್ಕರ್ ಅವರು ಶೋಷಿತ, ಹಿಂದುಳಿದ ಜಾತಿ ಸಮುದಾಯಗಳಿಗೆ ಕೊಟ್ಟ ಮಂತ್ರವಾಗಿದೆ. ಈ ಮೂರೂ ಮಂತ್ರಗಳ ಮೂಲಕ ಶೋಷಿತ ಜಾತಿ ಸಮುದಾಯಗಳು ಶಿಕ್ಷಣ ಪಡೆದು ದೊಡ್ಡ ಸಂಘಟನೆ ಮಾಡಿಕೊಳ್ಳುವ ಮೂಲಕ ಹೋರಾಟದ ಹಾದಿಯಲ್ಲಿ ತಮ್ಮ ಹಕ್ಕು ಮತ್ತು ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದರು.

ಜಾತಿ ವ್ಯವಸ್ಥೆಯಲ್ಲಿ ಜಾತಿ ಇರುವವರೆಗೂ ಸಮಾನತೆ ಬರುವುದಿಲ್ಲ. ಇದಕ್ಕೆ ಶಿಕ್ಷಣ ಮತ್ತು ಸಂಘಟನೆಯೇ ಪರಿಹಾರ ಎಂದರು. ಇದನ್ನೂ ಓದಿ: ಮೋದಿ ಮುಂದೆ ಮಾತನಾಡುವ ತಾಕತ್ತು ಇವರಿಗಿಲ್ಲ: ಶಿವರಾಜ ತಂಗಡಗಿ

ಶಿಕ್ಷಣ ಎಂದರೆ ಪ್ರಗತಿಪರ ಮತ್ತು ವೈಜ್ಞಾನಿಕವಾದ ಹಾಗೂ ವಿಚಾರಶೀಲವಾದ ಶಿಕ್ಷಣ ಪಡೆಯಬೇಕು. ಈಗ ಶಿಕ್ಷಿತರು ಎಂದು ಹೇಳಿಕೊಳ್ಳುವ ವೈದ್ಯರು, ಎಂಜಿನಿಯರ್ ಗಳೂ ಮೌಡ್ಯ, ಕಂದಾಚಾರವನ್ನು ಪಾಲಿಸುತ್ತಿದ್ದಾರೆ. ಶಿಕ್ಷಿತರೇ ಹೆಚ್ಚು ಜಾತಿವಾದಿಗಳಾಗಿ ಸಮಾಜದ ಪ್ರಗತಿಗೆ ಅಡ್ಡಿಯಾಗಿದ್ದಾರೆ ಎಂದರು.

ಸಹೋದರತ್ವ, ಸಮಾನತೆ ಮತ್ತು ಪರಧರ್ಮ ಸಹಿಷ್ಣುತೆ ನಮ್ಮ ಸಂವಿಧಾನ ನೀಡಿರುವ ಮಹೋನ್ನತ ಮೌಲ್ಯಗಳಾಗಿವೆ. ಈ. ಮೌಲ್ಯಗಳೇ ಹಿಂದುಳಿದ ಜಾತಿ, ಸಮುದಾಯಗಳಿಗೆ ದೊಡ್ಡ ಶಕ್ತಿ ಆಗಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಹಿಂದೂಗಳೆಂದರೆ ಸಿಎಂಗೆ ಯಾಕಿಷ್ಟೊಂದು ದ್ವೇಷ?: ಆರ್. ಅಶೋಕ್
Next: ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ: ಸಿಎಂ

Views:

148

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.