ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ ಇಂದು (ಬುಧವಾರ ಅ.01) ನಾಡಿನಲ್ಲೆಡೆ ಆಯುಧ ಪೂಜೆ ಹಬ್ಬವನ್ನು ಬಹಳ ಸಡಗರದಿಂದ ಆಚರಿಸಲಾಗುತ್ತಿದೆ.
ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ.
ಆಯುಧಪೂಜೆ ಹಿನ್ನೆಲೆಯಲ್ಲಿ ಇಂದು ಸದಾಶಿವನಗರದ ಗೃಹಕಚೇರಿಯಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ವಾಹನಗಳಿಗೆ ಪೂಜೆ ಸಲ್ಲಿಸಿದರು. ನಾಡದೇವತೆ ತಾಯಿ ಚಾಮುಂಡೇಶ್ವರಿ ಸರ್ವರಿಗೂ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು. ಇದನ್ನೂ ಓದಿ: ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ
