ಬೆಂಗಳೂರು: ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದ ಅಂಗವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಇಂದು (ಗುರುವಾರ ಅ. 02) ಉಭಯ ನಾಯಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ, ಎನ್ಎಸ್ ಯುಐ ಅಧ್ಯಕ್ಷ ಕೀರ್ತಿ ಗಣೇಶ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: 100ಕ್ಕೆ 100% ಇದೇ ನವಂಬರ್ ನಲ್ಲಿ ಡಿಕೆಶಿ ಸಿಎಂ ಆಗುತ್ತಾರೆ: ಶಿವರಾಮೇಗೌಡ
