Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದುರ್ಗೆ ಎಂದರೆ ಶಕ್ತಿ, ಗಾಂಧಿ ಎಂದರೆ ಶಾಂತಿ: ಡಿಕೆಶಿ
  • Bangalore
  • Politics
  • State

ದುರ್ಗೆ ಎಂದರೆ ಶಕ್ತಿ, ಗಾಂಧಿ ಎಂದರೆ ಶಾಂತಿ: ಡಿಕೆಶಿ

Praja Vahini October 2, 2025 1 minute read
WhatsApp Image 2025-10-02 at 12.32.01
Spread the love

ಬೆಂಗಳೂರು: ಗಾಂಧೀಜಿಯವರ ಮಹಾನ್ ಸ್ವರೂಪ ನಮ್ಮ ದೇಶಕ್ಕೆ ಬೆಳಕಾಗಿದೆ. ನಾವೆಲ್ಲರೂ ಗಾಂಧೀಜಿಯವರನ್ನು ಸ್ಮರಿಸೋಣ, ಅವರ ಆಶಯಗಳನ್ನು ಉಳಿಸೋಣ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು (ಗುರುವಾರ ಅ. 02) ನಡೆದ ರಾಷ್ಟಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ಪವಿತ್ರ ದಿನ. ಇಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿಯವರ ಜನ್ಮ ದಿನಾಚರಣೆ, ಮತ್ತು ವಿಜಯದಶಮಿಯ ಶುಭ ದಿನ ಕೂಡ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರ ಜನ್ಮದಿನ. ದುರ್ಗೆ ಎಂದರೆ ಶಕ್ತಿ, ಗಾಂಧಿ ಎಂದರೆ ಶಾಂತಿ. ಎಲ್ಲರಿಗೂ ಶಕ್ತಿ ಮತ್ತು ಶಾಂತಿ ಸಿಗಲಿ ಎಂದು ಕಾಂಗ್ರೆಸ್ ಪಕ್ಷದ ವತಿಯಿಂದ ನಾನು ಪ್ರಾರ್ಥಿಸುತ್ತೇನೆ ಎಂದರು.

ನಮ್ಮ ದೇಶದ ಯುವಕರಿಗೆ, ವಿದ್ಯಾರ್ಥಿಗಳಿಗೆ, ಜನತೆಗೆ ಗಾಂಧೀಜಿಯವರ ತತ್ವ, ಆದರ್ಶಗಳು ಹಾಗೂ ಗಾಂಧೀಜಿಯವರಿಂದ ಈ ದೇಶಕ್ಕೆ ಏನು ಉಪಯೋಗವಾಯಿತು ಎಂಬುದರ ಬಗ್ಗೆ ತಿಳಿಸಲು, ಮತ್ತು ಇವೆಲ್ಲವನ್ನೂ ಕೇವಲ ಪುಸ್ತಕದಲ್ಲಿ ಓದುವುದಲ್ಲದೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರಿಗೆ ಅರಿವು ಮೂಡಿಸಲು, ಗಾಂಧೀಜಿಯವರು ಕಾಂಗ್ರೆಸ್‌ ಅಧ್ಯಕ್ಷತೆ ವಹಿಸಿದ ಶತಮಾನೋತ್ಸವದ ಹಿನ್ನೆಲೆಯಲ್ಲಿ ನಮ್ಮ ಜಿ.ಸಿ. ಚಂದ್ರಶೇಖರ್ ಅವರ ನೇತೃತ್ವದಲ್ಲಿ ‘ಗಾಂಧಿ ಜ್ಯೋತಿ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡು ಅದನ್ನು ರಾಜ್ಯದ ಪ್ರತಿಯೊಂದು ಕ್ಷೇತ್ರಕ್ಕೆ ಕಳುಹಿಸಬೇಕೆಂದು ಯೋಜನೆ ರೂಪಿಸಿದ್ದೇವೆ. ಇದನ್ನೂ ಓದಿ: ಗಾಂಧೀಜಿಗೆ ಪುಷ್ಪ ನಮನ ಸಲ್ಲಿಸಿದ ಡಿಕೆಶಿ

ಇಂದು ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಜನ್ಮ ದಿನ ಸಹ ಇದ್ದು, ಅವರು ಒಬ್ಬ ಧೀಮಂತ ನಾಯಕರು, ಅವರು ಸರಳತೆ ನಮಗೆ ಎಂದೆಂದಿಗೂ ಸ್ಫೂರ್ತಿ. ಮಹಾತ್ಮ ಗಾಂಧೀಜಿಯವರು ನೂರು ವರ್ಷದ ಹಿಂದೆ ಕಾಂಗ್ರೆಸ್ ಅಧ್ಯಕ್ಷರಾಗಿ ರೆಸಲ್ಯೂಷನ್ ಮಾಡಿದ ಸಭೆ ಮತ್ತು ನಾವು ಈಗ ನಡೆಸಿದ ಸಭೆ, ಇವೆರಡನ್ನೂ ಸೇರಿಸಿ ನನ್ನ ಅನುಭವದ ಬಗ್ಗೆ ನಾನು ಒಂದು ಪುಸ್ತಕವನ್ನು ಸಹ ಬರೆದಿದ್ದೇನೆ. ಅದನ್ನು ಸಹ ಬಿಡುಗೊಡೆಗೊಳಿಸುತ್ತೇನೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ: ಸಿಎಂ
Next: ಪ್ರಕೃತಿ ಪ್ರತಿಯೊಬ್ಬರ ಆಸ್ತಿ: ಡಿಕೆಶಿ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.