Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ: ಸಿಎಂ
  • Bangalore
  • Bangalore
  • Politics
  • State

ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ: ಸಿಎಂ

Praja Vahini October 7, 2025 1 minute read
WhatsApp Image 2025-10-07 at 12.44.06
Spread the love

ಬೆಂಗಳೂರು: ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು (ಮಂಗಳವಾರ ಅ. 07) ಶ್ರೀ ಮಹರ್ಷಿ ವಾಲ್ಮೀಕಿ ತಪೋವನದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನುಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣ ದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಶೂದ್ರ ಜನಾಂಗದಲ್ಲಿ ಜನಿಸಿದ್ದರೂ, ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದರು.  ವಾಲ್ಮೀಕಿಯವರ ಪ್ರತಿಮೆಯನ್ನು 2017 ರಲ್ಲಿ ಸ್ಥಾಪಿಸಲಾಯಿತು. ವಾಲ್ಮೀಕಿ ಹಾಗೂ ಕನಕದಾಸರಂತಹ ಮಹಾನ್ ಸಂತರು ಸಮಾಜಮುಖಿಯಾಗಿ ಬದುಕಿದವರು. ಅವರು ಬೋಧಿಸಿದಂತೆ ಮಾನವೀಯ ಮೌಲ್ಯಗಳನ್ನು ಅನುಸರಿದವರು ಎಂದರು. ಇದನ್ನೂ ಓದಿ: ಸಿಎಂ ಕುರ್ಚಿಗೆ ಕುತ್ತು ನೀಲಕಂಠೇಶ್ವರ ಸ್ವಾಮಿ ಭವಿಷ್ಯ

ಸಚಿವಸಂಪುಟ ಪುನರ್ ರಚನೆ

ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಂದಿನ ದಿನಗಳಲ್ಲಿ ಸಚಿವಸಂಪುಟ ಪುನರ್ ರಚನೆ ನಡೆಯುವ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದರು.

ಮನುವಾದಿಗಳ ಕೈವಾಡ

ಸರ್ವೋಚ್ಛ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುತ್ತಾ, ಮುಖ್ಯ ನ್ಯಾಯಮೂರ್ತಿಯವರೇ ಈ ಘಟನೆಯನ್ನು ಕ್ಷಮಿಸಿದ್ದು, ಅವರ ದೊಡ್ಡಗುಣವನ್ನು ಬಿಂಬಿಸುತ್ತದೆ. ಆದರೆ ಇಂತಹ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಇದು ಮನುವಾದಿಗಳ ಕೈವಾಡವಾಗಿದೆ ಎಂದರು.

ಸಮೀಕ್ಷೆ ಅವಧಿ ವಿಸ್ತರಣೆ- ಪರಿಶೀಲಿಸಿ ತೀರ್ಮಾನ

ಸಮೀಕ್ಷೆಗೆ ಕಾಲಾವಕಾಶ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂದು ಸಮೀಕ್ಷೆಯ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಂತರ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

About the Author

Praja Vahini

Editor

View All Posts

Spread the love

Post navigation

Previous: ಸಿಎಂ ಕುರ್ಚಿಗೆ ಕುತ್ತು ನೀಲಕಂಠೇಶ್ವರ ಸ್ವಾಮಿ ಭವಿಷ್ಯ
Next: ಕುರುಬರನ್ನು ST ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಬೊಮ್ಮಾಯಿ ಸರ್ಕಾರ: ಸಿಎಂ

Views:

47

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.