ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಅವರ ಚೆನ್ನೈ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕರೂರ್ ಜಿಲ್ಲೆಯಲ್ಲಿ ನಡೆದ ಟಿವಿಕೆ ರ್ಯಾಲಿಯಲ್ಲಿ ನಡೆದ ಕಾಲ್ತುಳಿತದಲ್ಲಿ 41 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡ ನಂತರ ವಿಜಯ್ ವಿರುದ್ಧ ಟೀಕೆಗಳು ಕೇಳಿಬರುತ್ತಿರುವ ನಡುವೆಯೇ ಈ ಕರೆ ಬಂದಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ವಿಜಯ್ ಅವರ ನೀಲಂಕರೈ ನಿವಾಸದ ಸುತ್ತ ಭದ್ರತೆಯನ್ನು ಬಲಪಡಿಸಲಾಗಿದೆ. ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ, ಮತ್ತು ಅಧಿಕಾರಿಗಳು ಕರೆ ಸುಳ್ಳು ಎಂದು ದೃಢಪಡಿಸಿದ್ದಾರೆ. ವಿಜಯ್ ಅವರ ಮನೆಯನ್ನು ಗುರಿಯಾಗಿಸಿಕೊಂಡು ಬಂದಿರುವ ಬಾಂಬ್ ಬೆದರಿಕೆಗೂ ಮೊದಲು ಕಳೆದ 2 ವಾರಗಳಿಂದ ಪ್ರಮುಖ ಸಂಸ್ಥೆಗಳು ಮತ್ತು ವ್ಯಕ್ತಿಗಳಿಗೆ ವ್ಯಾಪಕ ಬೆದರಿಕೆಗಳು ಬಂದಿವೆ. ಇದನ್ನೂ ಓದಿ: ಬಿಗ್ ಬಾಸ್ ರೀ ಓಪನ್ ಗೆ ಕಿಚ್ಚನ ಕಸರತ್ತೆನು?
ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ, ಡಿಎಂಕೆ ಸಂಸದೆ ಕನಿಮೋಳಿ, ನಟಿ ತ್ರಿಶಾ, ಹಾಸ್ಯನಟ ಮತ್ತು ನಟ ಎಸ್.ವಿ. ಶೇಖರ್, ಹಾಗೆಯೇ ಕಮಲಾಲಯದಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಧಾನ ಕಚೇರಿ ಸೇರಿವೆ.
