ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಕಾಲದಲ್ಲಿ ಪ್ರವಾಹ ಆದಾಗ 63 ಹೊಸ ಗ್ರಾಮಗಳನ್ನೆ ಕಟ್ಟಿಸಿದರು. 2ನೇ ಸಾರಿ ಪ್ರವಾಹ ಆದಾಗ ಸುಮಾರು 3 ಲಕ್ಷ ಮನೆಗಳನ್ನು 5 ಲಕ್ಷ ಪರಿಹಾರ ನೀಡಿದ್ದೇವೆ. ನಾನು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರ ನೀಡುವ 2 ಪಟ್ಟು ಪರಿಹಾರ ನೀಡಿದ್ದೇವು. ಒಣ ಬೇಸಾಯಕ್ಕೆ 13 ಸಾವಿರ, ನೀರಾವರಿಗೆ 18 ಸಾವಿರ, ತೋಟಗಾರಿಗೆ ಬೆಳೆಗಳಿಗೆ 25 ಸಾವಿರ ರೂ. ಪ್ರತಿ ಎಕರೆಗೆ ಪರಿಹಾರ ನೀಡಿದ್ದೇವು. ಸುಮಾರು7 ಲಕ್ಷ ರೈತರಿಗೆ ಪರಿಹಾರ ನೀಡಿದ್ದೇವೆ. ರಾಜ್ಯ ಸರ್ಕಾರ ಕೂಡಲೇ ರೈತರಿಗೆ ಎರಡು ಪಟ್ಟು ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು
ಬಿಗ್ ಬಾಸ್ ಸಮಸ್ಯೆ ಬಗೆಹರಿಸಲಿ
ಬಿಗ್ ಬಾಸ್ ವಿಚಾರ ಆ ಸ್ಟುಡಿಯೊ ಮಾಲಕರು ಮತ್ತು ಅಧಿಕಾರಿಗಳ ನಡುವೆ ನಡೆಯುವುದು ಯಾವ ಕಾನೂನಿನ ಅಡಿಯಲ್ಲಿ ಯಾವ ಕ್ರಮ ಕೈಗೊಳ್ಳಬೇಕು ಎನ್ನುವುದಕ್ಕೂ ಕಾನೂನು ಪ್ರಕಾರ ನಡೆಯುವ ಪದ್ದತಿ ಇದೆ. ಈ ಮಧ್ಯೆ ಅದಕ್ಕೆ ಡಿಸಿಎಂ ಅವರು ಹಿಂದೆ ಆಡಿದ ಮಾತು ಸೇರಿಸಿ ಕೆಲವರು ಹೇಳುತ್ತಿದ್ದಾರೆ. ಅದು ಮುಖ್ಯವಲ್ಲ. ಎಲ್ಲೊ ದಾರಿ ತಪ್ಪುತ್ತಿದೆ ಎನಿಸುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರ ವ್ಯಾಪ್ತಿ ಏನು ಬಂದ್ ಮಾಡುವ ಅಧಿಕಾರ ಇದೆಯಾ ಇಲ್ಲವಾ ನೋಡಬೇಕು. ಒಂದು ಕಡೆ ಮನರಂಜನಾ ಉದ್ಯಮ ನಡೆಯಬೇಕು ಇನ್ನೊಂದೆಡೆ ಮಾಲಿನ್ಯವಾಗದಂತೆ ನೊಡಿಕೊಳ್ಳಬೇಕಿದೆ. ಇದನ್ನೂ ಓದಿ: ದಳಪತಿ ವಿಜಯ್ ಮನೆಗೆ ಬಾಂಬ್ ಬೆದರಿಕೆ
ಎಷ್ಟು ದಿನದಿಂದ ಈ ಸಮಸ್ಯೆ ಇದೆ. ಈಗ್ಯಾಕೆ ಈ ಕ್ರಮ ಕೈಗೊಂಡಿದ್ದಾರೆ ಎನ್ನುವ ಪ್ರಶ್ನೆ ಮೂಡುತ್ತದೆ. ಇಕೊ ಎಕನಾಮಿಕ್ಸ್ ಅಂತಾರೆ, ಆರ್ಥಿಕತೆಯೂ ನಡೆಯಬೇಕು, ಪರಿಸರವೂ ಉಳಿಯಬೇಕು. ಅದು ಈ ರಾಜ್ಯದಲ್ಲಿ ತಪ್ಪಿ ಹೋಗಿದೆ. ರಾಜ್ಯದಲ್ಲಿ ಎಲ್ಲವೂ ದಾರಿ ತಪ್ಪಿದೆ. ನಡೆದದ್ದೇ ದಾರಿ ಎನ್ನುವಂತಾಗಿದೆ. ಹಾಗೆ ಆದಾಗಲೇ ಈ ರೀತಿಯ ಘಟನೆಗಳು ನಡೆಯುತ್ತವೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅನುಮತಿ ಕೊಡೆಸಿ ಇದರಲ್ಲಿ ತಮ್ಮ ಪಾತ್ರ ಇಲ್ಲ ಎನ್ನುವುದನ್ನು ಸಾಬೀತು ಪಡಿಸುವ ಪ್ರಯತ್ನ ಮಾಡಿದ್ದರೆ ಎಂದು ಹೇಳಿದರು.
