Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟತೆಯಿಲ್ಲ: ಬೊಮ್ಮಾಯಿ
  • Bangalore
  • Politics
  • State

ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟತೆಯಿಲ್ಲ: ಬೊಮ್ಮಾಯಿ

Praja Vahini October 9, 2025 1 minute read
WhatsApp Image 2025-10-09 at 14.58.53
Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನವೆಂಬರ್ ನಲ್ಲಿ ಏನಾಗುತ್ತೊ ಬಿಡುತ್ತದೊ ಅದು ಕಾಂಗ್ರೆಸ್ ಆಂತರಿಕ ವಿಚಾರ.  ಆದರೆ, ಒಂದು ವಿಚಾರ ಸ್ಪಷ್ಟ ಆಡಳಿತ ಮಾಡುವುದನ್ನು ಬಿಟ್ಟು ಸಿಎಂ ನಾನು ಮುಂದುವರೆಯುತ್ತೇನೆ ಎನ್ನುವುದು ಕೆಲವರು ಅವರು ಮುಂದುವರೆಯುವುದಿಲ್ಲ ಎನ್ನುವುದು. ಕಾಂಗ್ರೆಸ್ ಶಾಸಕರು ಮತ್ತು ಮಂತ್ರಿಗಳ ನಡುವೆ ಸಾಕಷ್ಡು ಗೊಂದಲ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಇಂದು (ಗುರುವಾರ ಅಕ್ಟೋಬರ್ 9) ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಹಿನ್ನೆಲೆ ಮತ್ತು ಇಮೇಜ್ ಬಗ್ಗೆ ಯೋಚನೆ ಮಾಡುತ್ತಿದ್ದಾರೆ‌.  ಡಿಸಿಎಂ ಶಿವಕುಮಾರ್ ಪಕ್ಷ ಕಟ್ಟಿದ್ದಾರೆ ಅವರ ಬಗ್ಗೆಯೂ ಯೋಚನೆ ಮಾಡಿ ಯಾವುದೇ ನಿರ್ಧಾರಕ್ಕೆ ಬರಲು ಆಗುತ್ತಿಲ್ಲ. ಕ್ರಾಂತಿ ನವೆಂಬರ್ ನಲ್ಲಿ ಆಗುತ್ತದೊ ಡಿಸೆಂಬರ್ ನಲ್ಲಿ ಆಗುತ್ತದೊ ಕಾದುನೋಡಬೇಕು ಎಂದು ಹೇಳಿದರು.

ಕೇಂದ್ರದ ಅನುದಾನದಿಂದ ಅಭಿವೃದ್ಧಿ

ನರೇಂದ್ರ ಮೋದಿ ಸರ್ಕಾರ 15 ನೇ ಹಣಕಾಸು ಅಡಿಯಲ್ಲಿ ಹಾಗೂ ಇತರ ಯೋಜನೆಗಳಿಗೆ ಐದು ಪಟ್ಟು ಹಣ ಹೆಚ್ಚಿಗೆ ನೀಡಿದೆ. 15 ನೇ ಹಣಕಾಸು ಯೋಜನೆಯಲ್ಲಿ 14 ನೇ ಹಣಕಾಸು ಆಯೋಗಕ್ಕಿಂತ ಒಂದು ಲಕ್ಷ ಕೊಟಿ ಹೆಚ್ಚಿಗೆ ಕೊಟ್ಟಿದೆ. ಯುಪಿಎ ಅವಧಿಯಲ್ಲಿ ರಾಜ್ಯದ ರೈಲ್ವೆ ಯೋಜನೆಗಳಿಗೆ ಐದು ವರ್ಷದಲ್ಲಿ ಒಟ್ಟು 7 ಸಾವಿರ ಕೋಟಿ ರೂ. ಬಂದಿತ್ತು. ಈಗ ಪ್ರತಿ ವರ್ಷ ಏಳು ಸಾವಿರ ಕೊಟಿ ಬರುತ್ತಿದೆ. 6 ಸಾವಿರ ಕಿ.ಮೀ. ಹೈವೆ ಆಗುತ್ತಿದೆ. ರಾಜ್ಯದಲ್ಲಿ ಕೇಂದ್ರದ ಅನುದಾನದಿಂದಲೇ ಯೋಜನೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರದ ಬಳಿ ಹಣವೇ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಎಲ್ಲವೂ ದಾರಿ ತಪ್ಪಿದೆ: ಬೊಮ್ಮಾಯಿ

ಸಮೀಕ್ಷೆಗೆ ಮಹತ್ವ ಇಲ್ಲ

ಸಾಮಾಜಿಕ ಆರ್ಥಿಕ ಸಮೀಕ್ಷೆಯಿಂದ ಮಕ್ಕಳು ಮತ್ತು ಶಿಕ್ಷಕರಿಗೆ ದೊಡ್ಡ ಅನ್ಯಾಯವಾಗುತ್ತಿದೆ. ಪೂರ್ಣ ಪ್ರಮಾಣದಲ್ಲಿ ಸರಿಯಾಗಿ ಸಮೀಕ್ಷೆ ನಡೆಯುತ್ತಿಲ್ಲ. ಬಹಳಷ್ಟು ಜನ ಮನೆಯಲ್ಲಿ ಇರುವುದಿಲ್ಲ. ಸಹಕಾರ ನೀಡುತ್ತಿಲ್ಲ ಹೀಗಾಗಿ ಈ ಸಮೀಕ್ಷೆಗೆ ಯಾವುದೇ ಮಹತ್ವ ಉಳಿದಿಲ್ಲ ಎಂದರು.

 

 

About the Author

Praja Vahini

Editor

View All Posts

Spread the love

Post navigation

Previous: ಔತಣಕೂಟ ಆಯೋಜಿಸಿರುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್
Next: ಹಾಸನಾಂಬೆಯ ಮಹಿಮೆ ಗರ್ಭಗುಡಿಲ್ಲಿ ಉರಿಯುತ್ತಿದ್ದ ದೀಪ, ಬಾಡದ ಹೂವುಗಳು

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.