ಹಾಸನ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಾಡಿನ ಶಕ್ತಿ ದೇವತೆಯಾದ ಹಾಸನಾಂಬೆಯ ಗರ್ಭಗುಡಿ ಬಾಗಿಲನ್ನು ತೆರೆಯಲಾಗಿದೆ. ಇಂದು (ಗುರುವಾರ ಅ. 09) ಮಧ್ಯಾಹ್ನ 12:21ಕ್ಕೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ಕಳೆದ ವರ್ಷ ಗರ್ಭಗುಡಿ ಬಾಗಿಲು ಮುಚ್ಚುವ ವೇಳೆ ಹಚ್ಚಿದ್ದ ದೀಪ ಉರಿಯುತ್ತಿತ್ತು. ದೇವರ ಮುಂದೆ ಇಟ್ಟಿದ್ದ ನೈವೇದ್ಯ ಹಳಸಿರಲಿಲ್ಲ ಮತ್ತು ಹೂವು ಬಾಡಿರಲಿಲ್ಲ.
ಹೌದು, ಪುರಾಣ ಪ್ರಸಿದ್ದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಇಂದಿನಿಂದ ಅಕ್ಟೊಬರ್ 23 ರವರೆಗೆ ನಡೆಯಲಿದೆ. ಕೇಲವ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಇದನ್ನೂ ಓದಿ: ಇಂದಿನಿಂದ 15 ದಿನಗಳ ಕಾಲ ಹಾಸನಾಂಬೆಯ ದರ್ಶನ
ಕಳೆದ ವರ್ಷ ಅಕ್ಟೋಬರ್ 24 ರಿಂದ ನವೆಂಬರ್ 3ರವರೆಗೆ ಹಾಸನಾಂಬೆ ಜಾತ್ರೋತ್ಸವ ನಡೆದಿತ್ತು. ಈ ವೇಳೆ 20 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದರು. ಈ ಬಾರಿ 25 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ.
