ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದರಲ್ಲಿ ಮಹತ್ವದ ಯೋಜನೆಯದ ಅನ್ನಭಾಗ್ಯ ಯೋಜನೆಯಿಂದ ಈಗಾಗಲೇ ಅದೆಷ್ಟೋ ಬಡವರ ಹೊಟ್ಟೆ ತುಂಬುತ್ತಿದೆ..
ಕೇಂದ್ರ ಸರ್ಕಾರ 5 ಕೆ.ಜಿ ಅಕ್ಕಿ ಕೊಡುವುದರ ಜೊತೆಗೆ ರಾಜ್ಯ ಸರ್ಕಾರವೂ ಕೂಡ 5 ಕೆಜಿ ಅಕ್ಕಿಯನ್ನು ನೀಡುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಅಕ್ಕಿಯನ್ನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಕಾರಣಕ್ಕೆ ಇದೀಗ 5 ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ಭಾಗ್ಯ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಹೌದು, ಇಂದು ನಡೆದ ಸಚಿವ ಸಂಪುಟದಲ್ಲಿ 10 ಕೆಜಿ ಅಕ್ಕಿಯ ಬದಲು 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5 ಕೆಜಿಯ ಬದಲಾಗಿ ಇಂದಿರಾ ಆಹಾರ ಕಿಟ್ ಒದಗಿಸಲು ಮುಂದಾಗಿದೆ. ಈ ಇಂದಿರಾ ಕಿಟ್ ನಲ್ಲಿ ಅಡುಗೆ ಎಣ್ಣೆ, ಉಪ್ಪು, ಸಕ್ಕರೆ, ತೊಗರಿಬೇಳೆ ನೀಡಲಾಗುವುದು ಎಂದು ತಿಳಿದುಬಂದಿದೆ.
5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯ ನೀಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದೆ. ಇದನ್ನೂ ಓದಿ: ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ ; ಹೆಣ್ಣುಮಕ್ಕಳಿಗೆ ಋತುಚಕ್ರ ರಜೆಗೆ ಒಪ್ಪಿಗೆ
ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ.ಗಳಲ್ಲಿ 6,119.52 ಕೋಟಿ ರೂ. ವಚ್ಚದಲ್ಲಿ ಇಂದಿರಾ ಆಹಾರ ಕಿಟ್ ಅನ್ನು ಒದಗಿಸಲು ಬಜೆಟ್ ಮರುಹಂಚಿಕೆ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
