Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ: ಡಿಕೆಶಿ
  • Bangalore
  • Politics
  • State

ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ: ಡಿಕೆಶಿ

Praja Vahini October 11, 2025
WhatsApp Image 2025-10-11 at 12.22.28
Spread the love

ಬೆಂಗಳೂರು: ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು. ರಾಜಕಾರಣ ಮಾಡಲು ಅಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ. ನೀವು ಇದೇ ರೀತಿ ಸುದ್ದಿ ತಿರುಚುವುದಾದರೆ, ನಾನು ನಿಮಗೆ ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂ ಇಲ್ಲ, ಮಾಧ್ಯಮಗೋಷ್ಠಿ ಕರೆಯುವುದೂ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು.

ಲಾಲ್ ಬಾಗ್ ಉದ್ಯಾನದಲ್ಲಿ ಇಂದು (ಶನಿವಾರ ಅ. 11) ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ ಎಂದರು.

ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಅ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. ಆದರೆ ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆ ಎಂದು ನಾನೇ ಹೇಳಿದ್ದೇನೆ ಎಂದು ಕೆಲವು ಮಾಧ್ಯಮಗಳು ಸುದ್ದಿ ತಿದ್ದಿ ಪ್ರಸಾರ ಮಾಡುತ್ತಿವೆ. ನೀವು ಹಾಗೆಲ್ಲ ಸುದ್ದಿ ತಿರುಚಿ ತೋರಿಸಬೇಡಿ ಎಂದು ತಿಳಿಸಿದರು. ಇದನ್ನೂ ಓದಿ:  ರಸ್ತೆ ಕಾಮಗಾರಿಗೆ ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಕೆಶಿ

ನಾನು ಆ ಹೇಳಿಕೆ ಎಲ್ಲಿ ಹೇಳಿದ್ದೇನೆ. ಮಾಧ್ಯಮಗಳು ರಾಜಕಾರಣ ಮಾಡುವುದು ಬೇಡ. ನಾನು ಆ ರೀತಿ ಹೇಳಿಲ್ಲ, ಅದರ ಅಗತ್ಯವೂ ನನಗೆ ಇಲ್ಲ. ನನಗೆ ನನ್ನ ಗುರಿ ಗೊತ್ತಿದೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೋ ಕೊಡಲಿ. ರಾಜ್ಯದ ಜನರ ಸೇವೆ ಹಾಗೂ ಬೆಂಗಳೂರಿನ ನಾಗರೀಕರಿಗೆ ಉತ್ತಮ ಆಡಳಿತ ನೀಡಲು ಶ್ರಮಿಸುತ್ತಿದ್ದೇನೆ. ಆದರೆ ಒಳ್ಳೆಯ ಕೆಲಸ ಬಿಟ್ಟು ವಿವಾದ ಸೃಷ್ಟಿಸಲು ಕೆಲವು ಮಾಧ್ಯಮಗಳು ಪ್ರಯತ್ನಿಸುತ್ತಿವೆ” ಎಂದು ಹೇಳಿದರು.

ಇದೇ ರೀತಿ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಾಕಿ, ದಾರಿ ತಪ್ಪಿಸುವ ಪ್ರಯತ್ನ ಮಾಡಿದರೆ ನಾನು ಮಾನನಷ್ಟ ಮೊಕದ್ದಮೆ ಹಾಕಬೇಕಾಗುತ್ತದೆ ಎಂದೂ ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಮೋದಿ ಎಂದರೆ ಪ್ರೇರಣಾದಾಯಕ ಶಕ್ತಿ: ಬೊಮ್ಮಾಯಿ
Next: ನಶೆ ಯುವಕರ ಬದುಕನ್ನು ನರಕ ಮಾಡುತ್ತದೆ: ಬೊಮ್ಮಾಯಿ

Views:

47

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.