Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹೊರ ವರ್ತುಲ ರಸ್ತೆಯನ್ನು ಸುಸ್ಥಿತಿಯಲ್ಲಿಡಲು ಸೂಚನೆ: ಮಹೇಶ್ವರ್ ರಾವ್
  • Bangalore
  • State

ಹೊರ ವರ್ತುಲ ರಸ್ತೆಯನ್ನು ಸುಸ್ಥಿತಿಯಲ್ಲಿಡಲು ಸೂಚನೆ: ಮಹೇಶ್ವರ್ ರಾವ್

Praja Vahini October 13, 2025 1 minute read
WhatsApp Image 2025-10-13 at 14.55.44
Spread the love

ಬೆಂಗಳೂರು: ಹೆಬ್ಬಾಳ ಜಂಕ್ಷನ್‌ನಿಂದ ನಾಯಂಡಹಳ್ಳಿ ಜಂಕ್ಷನ್‌ವರೆಗಿನ ಹೊರ ವರ್ತುಲ ರಸ್ತೆಯನ್ನು ಸುಸ್ಥಿತಿಯಲ್ಲಿಡಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೊರ ವರ್ತುಲ ರಸ್ತೆ ಹಾಗೂ ಸರ್ವೀಸ್‌ ರಸ್ತೆಗಳನ್ನು ಪರಿಶೀಲಿಸುವ ಸಲುವಾಗಿ ಇಂದು (ಸೋಮವಾರ ಅ. 13) ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಹೆಬ್ಬಾಳ ಜಂಕ್ಷನ್ ಕೆಳಭಾಗದಲ್ಲಿ ವೆಟ್ ಮಿಕ್ಸ್ ಹಾಕಲಾಗಿದ್ದು, ತಕ್ಷಣ ಅದಕ್ಕೆ ಡಾಂಬರೀಕರಣ ಮಾಡಬೇಕು ಎಂದು ಹೇಳಿದರು. ಜೊತೆಗೆ, ಪಾದಚಾರಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ಹೈ ರೈಸ್ ಪಾದಚಾರಿ ಕ್ರಾಸಿಂಗ್ ನಿರ್ಮಿಸಲು ಸೂಚನೆ ನೀಡಿದರು.

ಹೆಬ್ಬಾಳ ಜಂಕ್ಷನ್‌ನಲ್ಲಿ ಪೊಲೀಸ್ ಠಾಣೆಯ ಬಳಿಕ ಬಸ್ ನಿಲ್ದಾಣಕ್ಕಾಗಿ ಮೀಸಲಾಗಿರುವ ಜಾಗ ಉಪಯೋಗವಾಗದೇ ಇರುವುದನ್ನು ಗಮನಿಸಿ, ಆ ಜಾಗದಲ್ಲಿ ಏನು ಮಾಡುವುದು ಸೂಕ್ತ ಎಂಬುದನ್ನು ಪರಿಶೀಲಿಸಿ, ಅದರ ವಿನ್ಯಾಸ ರೂಪಿಸಿ ಅನುಷ್ಠಾನಕ್ಕೆ ತರಲು ಸೂಚಿಸಿದರು.

ಸರ್ವಿಸ್ ರಸ್ತೆ ದುರಸ್ತಿ

ಭದ್ರಪ್ಪ ಲೇಔಟ್ ಮೇಲ್ಸೇತುವೆ ಬಳಿಯ ಸರ್ವಿಸ್ ರಸ್ತೆ ಹಾಳಾಗಿದ್ದು, ಹೈ ಡೆನ್ಸಿಟಿ ಕಾರಿಡಾರ್ ಯೋಜನೆಯಡಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ.  ಇದೇ ಸ್ಥಳದಲ್ಲಿ ಕೆ-ರೈಡ್ ವತಿಯಿಂದ ಕಾಮಗಾರಿ ನಡೆಯುತ್ತಿರುವುದರಿಂದ, ಆ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಸರ್ವಿಸ್ ರಸ್ತೆಯ ದುರಸ್ಥಿಯನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು.

ಭದ್ರಪ್ಪ ಲೇಔಟ್ ಮೇಲ್ಸೇತುವೆ ಬಳಿಕದ ಹೊರ ವರ್ತುಲ ರಸ್ತೆಗೆ ಡಾಂಬರೀಕರಣ ಮಾಡಲಾಗಿದ್ದು, ರಸ್ತೆ ಬದಿಯ ಡಕ್ಟ್‌ಗಳ ಚೇಂಬರ್‌ಗಳು ರಸ್ತೆ ಮಟ್ಟಕ್ಕಿಂತ ಕೆಳಗಿರುವುದನ್ನು ಗಮನಿಸಿ, ಅವುಗಳನ್ನು ತಕ್ಷಣ ರಸ್ತೆ ಮಟ್ಟಕ್ಕೆ ತರಲು ಸೂಚಿಸಿದರು. ಪಾದಚಾರಿ ಮಾರ್ಗಗಳನ್ನು ಸ್ವಚ್ಛವಾಗಿಡಲು ಹಾಗೂ ನಿರಂತರ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಇಎಲ್ ಜಂಕ್ಷನ್ ಅಭಿವೃದ್ಧಿ

ಬಿಇಎಲ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಬಿಇಎಲ್ ಜಂಕ್ಷನ್‌ನಲ್ಲಿ ರಸ್ತೆ ಮೇಲ್ಮೈ ಹಾಳಾಗಿರುವುದನ್ನು ವೈಟ್ ಟಾಪಿಂಗ್ ಗುತ್ತಿಗೆದಾರರಿಂದಲೇ ಮುಚ್ಚಿಸುವಂತೆ ಸೂಚಿಸಿದರು.  ಇದೇ ಜಂಕ್ಷನ್‌ನಲ್ಲಿ ಮತ್ತಿಕೆರೆ ಕಡೆಗೆ ಹೋಗುವ ಭಾಗದಲ್ಲಿ ಪಾದಚಾರಿ ಮಾರ್ಗವನ್ನು ಅಗಲೀಕರಣ ಮಾಡಲು ಸೂಚಿಸಿದರು. ಇದನ್ನೂ ಓದಿ: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಸಿಎಂ ಪ್ರಶ್ನೆ

ರಸ್ತೆ ಗುಂಡಿಗಳನ್ನು ಮುಚ್ಚಿ

ಹೊರ ವರ್ತುಲ ರಸ್ತೆಯಲ್ಲಿರುವ ಎಲ್ಲ ಗುಂಡಿಗಳನ್ನು ತಕ್ಷಣ ಮುಚ್ಚಬೇಕು. ರಾಜ್ ಕುಮಾರ್ ಸಮಾಧಿಯಿಂದ ನಾಗರಭಾವಿ ಜಂಕ್ಷನ್‌ವರೆಗಿನ ಸರ್ವಿಸ್ ರಸ್ತೆಗಳಲ್ಲಿರುವ ಗುಂಡಿಗಳನ್ನು ಮತ್ತು ಹಾಳಾದ ಮೇಲ್ಮೈಯನ್ನು ಸರಿಪಡಿಸಲು ಸೂಚಿಸಿದರು. ಗೊರಗುಂಟೆ ಪಾಳ್ಯ ಕೈಗಾರಿಕಾ ಪ್ರದೇಶದ ರಸ್ತೆ ಸಂಪೂರ್ಣ ಹಾಳಾಗಿರುವುದರಿಂದ, ಅದನ್ನೂ ಶೀಘ್ರ ದುರಸ್ಥಿಪಡಿಸಲು ನಿರ್ದೇಶಿಸಿದರು.

ರಸ್ತೆ ಬದಿಯಲ್ಲಿ ಕಸ ಬಿಸಾಡುವುದನ್ನು ನಿಯಂತ್ರಿಸಿ

ಹೊರ ವರ್ತುಲ ರಸ್ತೆ ಬದಿಗಳಲ್ಲಿ ಕೆಲವು ಕಡೆ ಕಸ ಬಿಸಾಡಲಾಗಿರುವುದನ್ನು ಗಮನಿಸಿ, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕು.  ಸರ್ವಿಸ್ ರಸ್ತೆಗಳಲ್ಲಿಯೂ ಕಸ ಬಿಸಾಡಿರುವುದನ್ನು ಕಂಡು ಬ್ಲಾಕ್ ಸ್ಪಾಟ್‌ಗಳನ್ನು ನಿರ್ಮೂಲನೆ ಮಾಡಲು ಸೂಚಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಸಿಎಂ ಪ್ರಶ್ನೆ
Next: ದೇವೇಗೌಡರು ಕರುನಾಡಿನ ಹೆಮ್ಮೆ: ಸತೀಶ್ ರೆಡ್ಡಿ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.