ಉಡುಪಿ: ನಾಟಕಕಾರ ಹಾಗೂ ಕನ್ನಡ ಚಿತ್ರರಂಗದ ಹಾಸ್ಯ ನಟ ರಾಜು ತಾಳಿಕೋಟೆ ಅವರು ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಅನಾರೋಗ್ಯದ ಕಾರಣಕ್ಕೆ ಅವರನ್ನು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಪಾಲಕಾರಿಯಾಗದೆ ನಿನ್ನೆ (ಸೋಮವಾರ ಅ. 13) ರಾಜು ತಾಳಿಕೋಟಿಯವರು ವಿಧಿವಶರಾಗಿದ್ದಾರೆ.
ಇನ್ನುಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಚಿತ್ರೀಕರಣದ ವೇಳೆ ರಾಜು ತಾಳಿಕೋಟೆ ಅವರು ಕುಸಿದು ಬಿದ್ದರು. ತಕ್ಷಣ ಅವರನ್ನು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.
ಇನ್ನು ರಾಜು ತಾಳಿಕೋಟಿಯವರು ವಿಧಿವಶರಾಗಿರುವುದರಿಂದ ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.
ಪ್ರಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಶೋಕಸೂಚನೆ ಹಂಚಿಕೊಂಡಿದ್ದಾರೆ. “ಬಯಲುಸೀಮೆಯ ಹೃದಯಕ್ಕೆ ನಮನ. ನೀವೆಂದರೆ ತುಂಬಾ ಪ್ರೀತಿ, ತುಂಬಾ ಖುಷಿ, ತುಂಬಾ ನೆನಪು. ಹೋಗಿಬನ್ನಿ, ಇದು ಸಾವಲ್ಲ, ನಿಮ್ಮ ಹುಟ್ಟು” ಎಂದು ಭಾವುಕವಾಗಿ ಬರೆದಿದ್ದಾರೆ.
ಅಲ್ಲದೆ ನಟ ಶೈನ್ ಶೆಟ್ಟಿ ಕಣ್ಣೀರಿಟ್ಟಿದ್ದು, ರಾಜು ತಾಳಿಕೋಟೆ ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು. ನಿನಗೋಸ್ಕರ ಈ ಚಿತ್ರ ಮಾಡುತ್ತಿದ್ದೇನೆ ಎಂದು ಹೇಳುತ್ತಿದ್ದರು ಎಂದು ರಾಜು ತಾಳಿಕೋಟೆಯವರ ನಿಧನಕ್ಕೆ ಕಣ್ಣೀರು ಹಾಕಿದ್ದಾರೆ.
ಮಣಿಪಾಲ್ ಆಸ್ಪತ್ರೆ ಎದುರುಗಡೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಗ್ ಬಾಸ್ ಸೀಸನ್ 7ರಲ್ಲಿ ಜೊತೆಗಿದ್ದೆವು. ಇಡೀ ಸೀಸನ್ನ ನಟರ ಜೊತೆ ಅನ್ಯೋನ್ಯ ಸಂಬಂಧವಿದೆ. ರಾಜು ತಾಳಿಕೋಟೆ ತುಂಬಾ ತಮಾಷೆಯ, ಬಹಳ ಪ್ರೀತಿಸುವ ವ್ಯಕ್ತಿ. ಸಿನಿಮಾ ನಿರ್ಮಾಣದ ಕಾಲ ಕೂಡಿ ಬಂದಾಗ ರಾಜು ಅವರನ್ನು ಸಂಪರ್ಕ ಮಾಡಿದ್ದೆ. ಇದನ್ನೂ ಓದಿ: ಕರ್ಮ ಯಾರನ್ನು ಬಿಡೋದಿಲ್ಲ: ನಿಖಿಲ್ ಕುಮಾರಸ್ವಾಮಿ
ನಮ್ಮ ಸಿನಿಮಾಗೆ ಮೊದಲು ಆಯ್ಕೆ ಮಾಡಿದ್ದು ರಾಜು ತಾಳಿಕೋಟೆ ಅವರನ್ನು. ಪಾತ್ರ ಮತ್ತು ಡೈಲಾಗ್ ಅವರಿಗಾಗಿಯೇ ಬರೆದಿದ್ದೇವೆ. ರಾಜು ತಾಳಿಕೋಟೆಯವರಿಗೆ ಒಟ್ಟು 40 ದಿನದ ಶೆಡ್ಯೂಲ್ ಫಿಕ್ಸ್ ಆಗಿತ್ತು. ಹೆಬ್ರಿಯಲ್ಲಿ ಮೂರು ದಿನದ ಶೂಟಿಂಗ್ ಮುಗಿಸಿದ್ದೇವೆ. ಉಡುಪಿ, ಮಂಗಳೂರು ಸುತ್ತಾಡಲು, ಮೀನು ತಿನ್ನಲು ಒಂದು ದಿನ ಮೊದಲೇ ಬಂದಿದ್ದರು. ಗೆಳೆಯರ ಜೊತೆ ಬೇರೆ ಬೇರೆ ಜಾಗಕ್ಕೆ ಸುತ್ತಾಡಿದ್ದಾರೆ ಎಂದರು.
