ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ.
ಹೌದು, ಲೋಕಾಯುಕ್ತ ಅಧಿಕಾರಿಗಳು ಇಂದು (ಮಂಗಳವಾರ ಅ. 14) ಬೆಳ್ಳಂಬೆಳಗ್ಗೆ ಬೆಂಗಳೂರು, ಬಾಗಲಕೋಟೆ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ 12 ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಲು ಮುಂದಾಗಿದ್ದಾರೆ.
ಬೆಂಗಳೂರಲ್ಲಿ ದಾಳಿ
ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ3 ಜನ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ. ವೈದ್ಯಕೀಯ ಅಧಿಕಾರಿ ಮಂಜುನಾಥ್, ಪಿಯು ಬೋರ್ಡ್ ನಿರ್ದೇಶಕಿ ಸುಮಂಗಳ, ಸರ್ವೇಯರ್ ಅಧಿಕಾರಿ ಗಂಗಾ ಮರೀಗೌಡ ಅವರ ಮನೆಗಳ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದ ತಂಡ ಸುಮಂಗಳ ಅವರ ಕೆಂಗೇರಿಯ ಸ್ಯಾಟಲೈಟ್ ಟೌನ್ನಲ್ಲಿರೋ ಮನೆ ಮೇಲೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನ ಪರಿಶೀಲಿಸುತ್ತಿದೆ.
ಬಾಗಲಕೋಟೆಯಲ್ಲಿ ದಾಳಿ
ಬಾಗಲಕೋಟೆಯಲ್ಲಿ ಕೆಬಿಜೆಎನ್ಎಲ್ AEE (ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜನಿಯರ್) ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಆಲಮಟ್ಟಿ ಬಲದಂಡೆ ಕಾಲುವೆಯ ಸಹಾಯಕ ಮುಖ್ಯ ಇಂಜಿನಿಯರ್ ಚೇತನ್. ನವನಗರದ ಸೆಕ್ಟರ್ 16ರಲ್ಲಿರುವ ಚೇತನ್ ಅವರ ಮನೆ ಹಾಗೂ ಕಮತಗಿಯಲ್ಲಿರುವ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಇದನ್ನೂ ಓದಿ: ಹಾಸನಾಂಬೆಯ ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರವೇ
ದಾವಣಗೆರೆಯಲ್ಲೂ ದಾಳಿ
ದಾವಣಗೆರೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಎಇಇ ಜಗದೀಶ್ ನಾಯ್ಕ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಸವಳಂಗ ರಸ್ತೆಯ ಶಿವಬಸವ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿರುವ ಅವರ ಮನೆ ಮೇಲು ದಾಳಿಯಾಗಿದೆ.
