ಹಾಸನ: ನಾಡ ದೇವತೆ ಹಾಗೂ ಶಕ್ತಿ ದೇವತೆಯಾದ ಹಾಸನಂಬೆಯ ದರ್ಶನಕ್ಕೆ ಈಗಾಗಲೇ ಭಕ್ತಾದಿಗಳ ಸಾಗರವೇ ಹರಿದು ಬರುತ್ತಿದ್ದು, ಅದರಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕುಟುಂಬ ಸಮೇತವಾಗಿ ನಿನ್ನೆ( ಮಂಗಳವಾರ ಅಕ್ಟೋಬರ್ 14) ರಂದು ಹಾಸನಾಂಬೆಯ ಸನ್ನಿಧಿಗ ಭೇಟಿ ಮಾಡಿ ದರ್ಶನ ಪಡೆದಿದ್ದಾರೆ.
ಇನ್ನು ಹಾಸನಾಂಬೆಯ ಗರ್ಭಗುಡಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಡಿಕೆಶಿ ಅವರು ಪೂಜೆ ಮಾಡಿಸುತ್ತಿರುವ ಸಂದರ್ಭದಲ್ಲಿ ಹಾಸನಾಂಬೆ ಮಹಾಪ್ರಸಾದವನ್ನು ನೀಡಿದ್ದಾಳೆ.
ಹೌದು, ಮಂಗಳವಾರ ರಾತ್ರಿ ಪತ್ನಿಯೊಂದಿಗೆ ಹಾಸನಾಂಬೆ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಡಿಸಿಎಂಗೆ ವಿಜಯೀ ಶ್ರೇಯಸ್ಸು ಲಭಿಸಲೆಂದು ನಾರಾಯಣಿ ನಮಸ್ಕಾರ ಮಂತ್ರದ ಮೂಲಕ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ಲೋಕಾಯುಕ್ತ ದಾಳಿ; ಭ್ರಷ್ಟ ಅಧಿಕಾರಿಗಳ ಆಸ್ತಿ ಪತ್ತೆಯಾದದ್ದು ಎಷ್ಟು ಗೊತ್ತಾ?
ಪೂಜೆ ನೇರವೇರಿಸುವ ಶುಭ ಸಮಯದಲ್ಲಿ ದೇವಿಯ ಬಲಗಡೆಯಿಂದ ಹೂವು ವರದವಾಗಿ ಬಿದ್ದಿತು. 2 ಬಾರಿ ದೇವಿಯ ಬಲಭಾಗದ ಹೂವು ಬಿದ್ದಿತು.
ಪೂಜೆ ಬಳಿಕ ಮಾತನಾಡಿದ ಡಿಕೆಶಿ, ನಮಗೆ, ನಿಮಗೆ, ಎಲ್ಲರಿಗೂ ಭಗವಂತ ಶಾಂತಿ, ನೆಮ್ಮದಿ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.
