Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜೀವ ಬೆದರಿಕೆ ಕರೆಗಳ ವಿಡಿಯೋ ರಿಲೀಸ್ ಮಾಡಿದ ಪ್ರಿಯಾಂಕ ಖರ್ಗೆ
  • Bangalore
  • Crime
  • Politics
  • State

ಜೀವ ಬೆದರಿಕೆ ಕರೆಗಳ ವಿಡಿಯೋ ರಿಲೀಸ್ ಮಾಡಿದ ಪ್ರಿಯಾಂಕ ಖರ್ಗೆ

Praja Vahini October 15, 2025 1 minute read
WhatsApp Image 2025-10-15 at 13.53.00
Spread the love

ಬೆಂಗಳೂರು: ಸಚಿವ ಪ್ರಿಯಾಂಕ ಖರ್ಗೆ ಅವರು RSS ಬಗ್ಗೆ  ಮಾತನಾಡಿದ್ದಕ್ಕೆ ಅವರಿಗೆ ಈಗಾಗಲೇ ಜೀವ ಬೆದರಿಕೆಯ ಕರೆಗಳು ಹಲವಾರು ಬರುತ್ತಿದೆ. ಇಂಟರ್ನ್ಯಾಷನಲ್ ನಂಬರ್ ನಿಂದ ಅವರಿಗೆ ಜೀವ ಬೆದರಿಕೆ ಕರೆ ಬಂದಿರುವುದನ್ನು ಖುದ್ದು ಅವರೇ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ..

ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ.

ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ?

ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು

ಬಿವೈ ವಿಜಯೇಂದ್ರ, ಆರ್ ಅಶೋಕ್, ಸಿಟಿ ರವಿ, ಚಲವಾದಿ ನಾರಾಯಣ ಸ್ವಾಮಿ ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ.

ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ.

ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, RSS ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ. ಇದನ್ನೂ ಓದಿ: ಬೆದರಿಕೆ ಕರೆಗೆ ನಾನು ಬಗ್ಗಲ್ಲ: ಪ್ರಿಯಾಂಕ್ ಖರ್ಗೆ

RSS ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ.

ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ.

ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಮಳೆಯನ್ನು ಲೆಕ್ಕಿಸದೆ ಕರ್ತವ್ಯದಲ್ಲಿ ನಿರತರಾದ ಕೃಷ್ಣಬೈರೇಗೌಡ!
Next: ಇನ್ಮುಂದೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಸುಲಭ: ಡಿಕೆಶಿ

Views:

39

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.