Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಾಸನಾಂಭೆ; VIP ವ್ಯವಸ್ಥೆ ಇಲ್ಲದ ಶ್ರೀಸಾಮಾನ್ಯರ ದರ್ಶನಕ್ಕೆ ಆಧ್ಯತೆ: ಸಿಎಂ
  • Politics
  • State
  • ಹಾವೇರಿ

ಹಾಸನಾಂಭೆ; VIP ವ್ಯವಸ್ಥೆ ಇಲ್ಲದ ಶ್ರೀಸಾಮಾನ್ಯರ ದರ್ಶನಕ್ಕೆ ಆಧ್ಯತೆ: ಸಿಎಂ

Praja Vahini October 15, 2025 1 minute read
WhatsApp Image 2025-10-15 at 14.36.52
Spread the love

ಹಾಸನ:  ವರ್ಷಕ್ಕೊಮ್ಮೆ ದರ್ಶನ ನೀಡುವ ದಕ್ಷಿಣ ಭಾರತದ ಅತ್ಯಂತ ಪವಿತ್ರ ಶಕ್ತಿ ಪೀಠಗಳಲ್ಲಿ ಒಂದಾದ ಹಾಸನಾಂಬ ದೇವಸ್ಥಾನದ ಬಾಗಿಲು ತೆರೆದಿದ್ದು ಈಗಾಗಲೇ ಲಕ್ಷಾಂತರ ಭಕ್ತರು ದರ್ಶನ ಪಡೆದು ಧನ್ಯರಾಗಿದ್ದಾರೆ.

ಇನ್ನು ಹಾಸನಾಂಭ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆಧ್ಯತೆ ನೀಡಿದ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು.

ಹಾಸನಾಂಭ ದೇವಿ ಮತ್ತು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ಕಳೆದ ವರ್ಷವೂ ದರ್ಶನ ಪಡೆದಿದ್ದೆ. ಈ ವರ್ಷವೂ ದರ್ಶನ‌ ಪಡೆದಿದ್ದೇನೆ. ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿಗಾಗಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.

ಈ ಬಾರಿ ಅಗತ್ಯಕ್ಕಿಂತ ಹೆಚ್ವು ಮಳೆ ಬಿದ್ದು ರೈತರಿಗೆ ಆಗಿರುವ ನಷ್ಟ ಭರಿಸಲು NDRF ನಿಧಿ ಜೊತೆಗೆ ರಾಜ್ಯ ಸರ್ಕಾರವೂ ಹೆಚ್ಚುವರಿ ಪರಿಹಾರ ನೀಡುತ್ತಿದ್ದೇವೆ. ಹಿಂದೆಂದೂ ಯಾರೂ ನೀಡದಷ್ಟು ಬೆಳೆ ಹಾನಿ ಪರಿಹಾರವನ್ನು ನಾವು ನೀಡಿದ್ದೇವೆ. ಮುಂದಿನ ವರ್ಷ ಬೆಳೆ ಹಾನಿ ಪರಿಸ್ಥಿತಿ ಬರದಿರಲಿ ಎಂದು ಹಾಸನಾಂಭ ಮತ್ತು ಸಿದ್ದೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದರು.  ಇದನ್ನೂ ಓದಿ: ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ಡಿಕೆಶಿ

ನಮ್ಮದು ಕುವೆಂಪು ಅವರ ಆಶಯದ “ಸರ್ವ ಜನಾಂಗದ ಶಾಂತಿಯ ತೋಟ” ಆಗಿದೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸೋಣ.  ಎಲ್ಲಾ ಧರ್ಮದ ದೇವರ ಆಶಯವೂ ಮನುಷ್ಯ ಪ್ರೀತಿ ಮತ್ತು ಸೌಹಾರ್ದದ ಬದುಕು. ಇದಕ್ಕೆ ತಕ್ಕಂತೆ ನಾವೆಲ್ಲರೂ ಸಹೃದತೆಯಿಂದ ಮನುಷ್ಯ ಧರ್ಮವನ್ನು ಪಾಲಿಸಬೇಕು ಎಂದರು.

ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನ

ಹಾಸನಾಂಭ ಜಾತ್ರೆಗೆ ಹೆಚ್ಚುವರಿ ಅನುದಾನವನ್ನು ರಾಜ್ಯ ಬಜೆಟ್ ನಲ್ಲಿ ಘೋಷಿಸುತ್ತೀರಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಜಿಲ್ಲಾಳಿತದ ಜೊತೆ ಚರ್ಚಿಸುತ್ತೇನೆ. ಅಗತ್ಯಬಿದ್ದರೆ ಅನುದಾನ, ಹಣಕಾಸಿನ ನೆರವು ನೀಡಲಾಗುವುದು ಎಂದರು.

ಈ ಸಂರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ಶಾಸಕ ಶಿವಲಿಂಗೇಗೌಡರು, ಸಂಸದ ಶ್ರೇಯಸ್ ಪಟೇಲ್, ಹೂಡ ಅಧ್ಯಕ್ಷ ಶಿವಪ್ಪ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ಡಿಕೆಶಿ
Next: SSLC, PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.