Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ  ಹೆದರುವುದಿಲ್ಲ: ಸಿಎಂ
  • Politics
  • State
  • ಮೈಸೂರು

ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ  ಹೆದರುವುದಿಲ್ಲ: ಸಿಎಂ

Praja Vahini October 15, 2025 1 minute read
WhatsApp Image 2025-10-15 at 17.48.21
Spread the love

ಮೈಸೂರು: ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆ ಬರುತ್ತಿರುವುದ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.

ಇಂದು (ಬುಧವಾರ ಅ. 15) ಮೈಸೂರು ಏರ್ ಪೋರ್ಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಆರ್.ಎಸ್.ಎಸ್. ನಿಷೇಧದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ.

ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಬೆದರಿಕೆಗೆ ಹೆದರುವುದಿಲ್ಲ

ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ ಅವರು ಹೆದರುವುದಿಲ್ಲ. ನಾನೂ ಹೆದರುವುದಿಲ್ಲ ಎಂದರು. ಇದನ್ನೂ ಓದಿ: ಹಾಸನಾಂಭೆ; VIP ವ್ಯವಸ್ಥೆ ಇಲ್ಲದ ಶ್ರೀಸಾಮಾನ್ಯರ ದರ್ಶನಕ್ಕೆ ಆಧ್ಯತೆ: ಸಿಎಂ

ಎಲ್ಲ ಶಾಸಕರಿಗೂ ಅನುದಾನ

ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಉಚ್ಚ ನ್ಯಾಯಾಲಯಕ್ಕೆ ಶ್ರೀನಿವಾಸಪುರ ಶಾಸಕರು ಮೊರೆ ಹೋಗಿರುವ ಬಗ್ಗೆ ಮಾತನಾಡಿ, ಜೆಡಿಎಸ್ ನವರು   ನಮ್ಮ ಶಾಸಕರಿಗೆ  ಅನುದಾನ ನೀಡಿದ್ದರೇ?  ಎಂದು ಪ್ರಶ್ನಿಸಿದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗಬೇಕಿದ್ದು, ಎಲ್ಲರಿಗೂ ಅನುದಾನ ಒದಗಿಸಲಾಗುತ್ತಿದೆ ಎಂದರು.

ಇನ್ನು ಮೈಸೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಬಿಜೆಪಿಯವರು ತಾಕತ್ತಿದ್ದರೆ ಆರ್.ಎಸ್.ಎಸ್. ಮೇಲೆ ನಿಷೇಧ ಹೇರಲಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣಾ ಸಂದರ್ಭದಲ್ಲಿಯೂ ಬಿಜೆಪಿಯವರು ತಾಕತ್ತಿದ್ದರೆ ಬನ್ನಿ ಎಂದಿದ್ದರು. ಆದರೆ ಸೋತು ಹೋದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: SSLC, PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
Next: ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ!

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.