Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅನ್ನ ತಿನ್ನುವ ಹಕ್ಕಿದೆ, ಬಿಸಾಡುವ ಹಕ್ಕಿಲ್ಲ: ಕೆಹೆಚ್. ಮುನಿಯಪ್ಪ
  • Bangalore
  • Politics
  • State

ಅನ್ನ ತಿನ್ನುವ ಹಕ್ಕಿದೆ, ಬಿಸಾಡುವ ಹಕ್ಕಿಲ್ಲ: ಕೆಹೆಚ್. ಮುನಿಯಪ್ಪ

Praja Vahini October 16, 2025 1 minute read
WhatsApp Image 2025-10-16 at 14.00.53
Spread the love

ಬೆಂಗಳೂರು: ಅಕ್ಟೋಬರ್-16 ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ. ಪ್ರತಿ ವರ್ಷ ಅಕ್ಟೋಬರ್ 16 ರಂದು ವಿಶ್ವದಾದ್ಯಂತ “ವಿಶ್ವ ಆಹಾರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಸಚಿವ ಕೆಹೆಚ್. ಮುನಿಯಪ್ಪ ಹೇಳಿದರು.

ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1979ರಲ್ಲಿ ಸಂಯುಕ್ತ ರಾಷ್ಟ್ರಗಳ ಆಹಾರ ಮತ್ತು ಕೃಷಿ ಸಂಸ್ಥೆ (FAO) ಪ್ರಾರಂಭವಾಯಿತು. ಈ ಸಂಸ್ಥೆಯ 1945ರ ಅಕ್ಟೋಬರ್-16ರಂದು ಸಂಸ್ಥೆ ಸ್ಥಾಪಿತವಾದ ದಿನದ ಸವಿನೆನಪಿಗಾಗಿ ವಿಶ್ವ ಆಹಾರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.

ವಿಶ್ವ ಆಹಾರ ದಿನಾಚರಣೆಯ ಪ್ರಮುಖ ಉದ್ದೇಶ

ಎಲ್ಲಾರಿಗೂ ಆಹಾರದ ಹಕ್ಕು, ಹಸಿವುಮುಕ್ತ, ಪೌಷ್ಠಿಕಯುಕ್ತ ಆಹಾರ ವಿತರಣೆ, ಸುಸ್ಥಿರ ಕೃಷಿ ಅಭಿವೃದ್ಧಿ ಮತ್ತು ಆಹಾರ ಭದ್ರತೆ ಕುರಿತು ಜಾಗೃತಿ ಮೂಡಿಸುವುದು.

ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ಎರಡು ವರ್ಷಗಳ ಹಿಂದೆ ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿದ್ದ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ.

ಭಾರತದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಊಟದ ಎಲೆಗಳಲ್ಲಿ ವ್ಯರ್ಥವಾಗುವ‌ ಆಹಾರ ಪ್ರಮಾಣ ಸುಮಾರು ಶೇಕಡಾ 25%. ಭಾರತ ದೇಶದ ಕರ್ನಾಟಕಕ್ಕೆ ಸೀಮಿತವಾಗಿ ಹೇಳುವುದಾದರೆ.

ಮುಖ್ಯವಾಗಿ ಮದುವೆ ಮುಂತಾದ ಸಾರ್ವಜನಿಕ ಸಮಾರಂಭಗಳಲ್ಲಿ ಆಹಾರ ಯಥೇಚ್ಛವಾಗಿ ವ್ಯರ್ಥವಾಗುವುದು ಅತಿಹೆಚ್ಚು ಆಹಾರವನ್ನು ದುರುಪಯೋಗ ಪಡಿಸಿಕೊಳ್ಳುವುದನ್ನು ಸ್ವತಃ ಅನುಭವದಿಂದ ಗಮನಿಸಿದ್ದೇನೆ.

ರೈತರು ಬಿತ್ತನೆ ಮಾಡಿ, ಅದು ಬೆಳೆದು ಫಸಲಾಗಿ ಕಟಾವು ಮಾಡಿ, ಸಂಗ್ರಹಿಸಿ ಸಾಗಾಣಿಕೆ ಮಾಡಿ, ಮಾರಾಟ ಮಾಡಿ ಅದು ಮನೆ ಮನೆಗೆ ಸೇರಿ ಆಹಾರವಾಗಿ ನಮ್ಮ ಎಲೆ ಅಥವಾ ತಟ್ಟೆಗೆ ಸೇರುವ ವೇಳೆಗೆ ಸಾಕಷ್ಟು ಸಹಜವಾಗಿ ಮತ್ತು ಅನಿವಾರ್ಯವಾಗಿ ನಷ್ಟವಾಗಿರುತ್ತದೆ. ಮತ್ತೆ ಆಹಾರವನ್ನು ನಾವು ಬಡಿಸಿಕೊಂಡು ತಟ್ಟೆಯಲ್ಲಿ ಶೇಕಡಾ 25% ವ್ಯರ್ಥ ಮಾಡಿದರೆ ಒಟ್ಟು ಆಹಾರ ಬೆಳೆಗಳ ದುರುಪಯೋಗ ಎಷ್ಟಾಗಬಹುದು ಊಹಿಸಿ ಎಂದರು. ಇದನ್ನೂ ಓದಿ: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಸಿಎಂ

ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಯ ಮೂಲಕ ಸಮ ಸಮಾಜ ನಿರ್ಮಾಣದ ಆಶಯ ಹೊಂದಿದೆ. 1 ಲಕ್ಷ ಕೋಟಿಗೂ ಹೆಚ್ಚು ಅನುದಾನವನ್ನು ಕಳೆದ ಎರಡೂವರೆ ವರ್ಷಗಳಿಂದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆವ್ಯಯ ಮಾಡಲಾಗಿದೆ.

ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ

ಭಾರತ ಸರ್ಕಾರ 2013ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು ಮೊಟ್ಟಮೊದಲು ಜಾರಿಗೆ ತಂದ ರಾಜ್ಯ ಕರ್ನಾಟಕ. ಸಿದ್ಧರಾಮಯ್ಯರವರು ಮೊದಲ ಅವಧಿ ಮತ್ತು 2ನೇ ಅವಧಿಯಲ್ಲಿ ಅನ್ನಭಾಗ್ಯ ಯೋಜನೆಗೆ ಅತ್ಯಂತ ಪ್ರಾಮುಖ್ಯತೆ ಕೊಡುವ ಮೂಲಕ ಕರ್ನಾಟಕ ರಾಜ್ಯ ಹಸಿವುಮುಕ್ತ ಕರ್ನಾಟಕವಾಗಿಸಿರುವುದು ನಮ್ಮ ಸರ್ಕಾರದ ಹೆಮ್ಮೆಯ ವಿಷಯವಾಗಿದೆ.

ಅನ್ನಭಾಗ್ಯ ಯೋಜನೆಯಡಿ ರಾಜ್ಯದಲ್ಲಿ 10,60,800 ಅಂತ್ಯೋದಯ ಅನ್ನಯೋಜನೆ ಮತ್ತು 1,26,00,959 ಆದ್ಯತಾ ಪಡಿತರ ಚೀಟಿಗಳು ಒಟ್ಟು 4,48,29,135 ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ರಾಜ್ಯ ಸರ್ಕಾರದ ಹೆಚ್ಚುವರಿ 5 ಕೆ.ಜಿ. ಸೇರಿ ಒಟ್ಟು 10 ಕೆ.ಜಿ. ಅಕ್ಕಿ ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಿಸುವ ಮೂಲಕ ಹಸಿದ ಹೊಟ್ಟೆಗೆ ಅನ್ನ ನೀಡುವ ಮಹತ್ವ ಕೆಲಸವನ್ನು ಸರ್ಕಾರ ಮಾಡುತ್ತಿದೆ.

 

 

About the Author

Praja Vahini

Editor

View All Posts

Spread the love

Post navigation

Previous: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಸಿಎಂ
Next: ಬೆಂಗಳೂರಿನಲ್ಲಿ ಜೈಟೆಕ್ಸ್‌ ಗ್ಲೋಬಲ್‌ ಸಮ್ಮೇಳನ

Views:

38

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.