Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ: ಸಿಎಂ
  • Politics
  • State
  • ಮೈಸೂರು

ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ: ಸಿಎಂ

Praja Vahini October 17, 2025 1 minute read
WhatsApp Image 2025-10-17 at 14.07.23
Spread the love

ಮೈಸೂರು: ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯ‌ಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಯುವ ಸಮೃದ್ಧಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು. ಈ 11 ವರ್ಷದಲ್ಲಿ 22 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು ಸುಳ್ಳು ಹೇಳಿದರು.

ನಾವು ಅವರಂತೆ ಸುಳ್ಳು ಹೇಳುವುದಿಲ್ಲ ಎಂದು ಸರ್ಕಾರದಿಂದ ಭರ್ತಿಯಾದ ಹುದ್ದೆಗಳ ಮತ್ತು ಉದ್ಯೋಗ ಮೇಳದಲ್ಲಿ ಭರ್ತಿಯಾದ ಹುದ್ದೆಗಳ ವಿವರಗಳನ್ನು ನೀಡಿದರು.

ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ‌ ಸರ್ಕಾರ ಬೆಂಗಳೂರಿನಲ್ಲಿ ನಡೆಸಿದ ಉದ್ಯೋಗ ಮೇಳದಿಂದಾಗಿ 58892 ಮಂದಿ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿ ಅನುಕೂಲ, ಅರಿವು ಪಡೆದುಕೊಂಡಿದ್ದಾರೆ. ಇವರಲ್ಲಿ 11507 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 22819 ಅಭ್ಯರ್ಥಿಗಳ ಹೆಸರನ್ನು short list ಮಾಡಲಾಗಿದೆ ಎಂದು ವಿವರಿಸಿದರು.

ಜಿಲ್ಲೆಗಳಲ್ಲಿ ನಡೆದ ಉದ್ಯೋಗ ಮೇಳದಲ್ಲಿ 120563 ಅಭ್ಯರ್ಥಿಗಳು ಭಾಗವಹಿಸಿ, 24391 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 48232 ಅಭ್ಯರ್ಥಿಗಳ ಹೆಸರನ್ನು short list ಮಾಡಲಾಗಿದೆ ಎಂದು ಪಟ್ಟಿ ನೀಡಿದರು. ಇದನ್ನೂ ಓದಿ:  ಬೆಂಗಳೂರಿನಲ್ಲಿ ಎದ್ದು ಕಾಣುತ್ತಿದೆ ಸಂಚಾರಿ ಪೊಲೀಸ್ ಅಧಿಕಾರಿಗಳ ದರ್ಪ

ಹಿಂದಿನ ಸರ್ಕಾರ ಉದ್ಯೋಗಾಕಾಂಕ್ಷಿಗಳನ್ನು ಸಂಪೂರ್ಣ ನಿರ್ಲಕ್ಷಿಸಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಈ ಎರಡೂವರೆ ವರ್ಷಗಳಲ್ಲಿ ಸರ್ಕಾರದಲ್ಲಿ ಖಾಲಿ ಇದ್ದ 28000 ಉದ್ಯೋಗಗಳನ್ನು ಈಗಾಗಲೇ ಭರ್ತಿ ಮಾಡಿದೆ. 35 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.

ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಸೃಷ್ಟಿಸುವ ಮಹತ್ತರ ಕಾರ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಬೆಂಗಳೂರಿನಲ್ಲಿ ಎದ್ದು ಕಾಣುತ್ತಿದೆ ಸಂಚಾರಿ ಪೊಲೀಸ್ ಅಧಿಕಾರಿಗಳ ದರ್ಪ
Next: ಬಿಹಾರ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ: ಸಿಎಂ 

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.