ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಳೆದ ಕೆಲವು ದಿನಗಳಿಂದ ಬೆಂಗಳೂರು ನಡಿಗೆಯನ್ನು ಪ್ರಾರಂಭ ಮಾಡಿದ್ದು, ಈಗಾಗಲೇ ಹಲವಾರು ಪಾರ್ಕ್ಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ. ಅದರಂತೆ ಇಂದು (ಶನಿವಾರ ಅಕ್ಟೋಬರ್ 18) ರಂದು ಕೆ ಆರ್ ಪುರಂನಲ್ಲಿರುವ ಟಿಸಿ ಪಾಳ್ಯ ವೆಂಗಯ್ಯ ಕೆರೆ ಹತ್ತಿರ ಇರುವಂತಹ ಪಾರ್ಕ್ ಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.
ಹೌದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ಕೆ.ಆರ್.ಪುರಂನ ಟಿ.ಸಿ.ಪಾಳ್ಯದಲ್ಲಿರುವ ವೆಂಗಯ್ಯ ಪಾರ್ಕ್ನಲ್ಲಿ ‘ಬೆಂಗಳೂರು ನಡಿಗೆ’ ಅಭಿಯಾನದ ಅಂಗವಾಗಿ ನಾಗರಿಕರೊಂದಿಗೆ ಸಂವಾದ ನಡೆಸಿದರು. ಇದನ್ನೂ ಓದಿ: ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ
ಈಸಂರ್ಭದಲ್ಲಿ ಶಾಸಕ ಬೈರತಿ ಬಸವರಾಜ್, ಎಂಎಲ್ಸಿ ಶ್ರೀನಿವಾಸ್, ಮಾಜಿ ಸಂಸದ ಪ್ರೊ. ರಾಜೀವ್ ಗೌಡ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಬಿಬಿಎಂಪಿ ಮುಖ್ಯ ಆಯುಕ್ತ ಡಾ. ಮಹೇಶ್ವರರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
