ಬೆಂಗಳೂರು: ಬಯೋಕಾನ್ ಸಂಸ್ಥೆಯ ಮುಖ್ಯಸ್ಥ ಕಿರಣ್ ಮಂಜುದಾರ್ ಶಾ ಅವರು ಬೆಂಗಳೂರು ನಗರದಲ್ಲಿರುವ ರಸ್ತೆ ಗುಂಡಿಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ಇತ್ತೀಚಿಗಷ್ಟೇ ಆಕ್ರೋಶ ಹೊರಹಾಕಿದ ಅವರು ಇಂದು (ಮಂಗಳವಾರ ಅ. 21) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಹೌದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಸದಾಶಿವ ನಗರದಲ್ಲಿರುವ ಮನೆಗೆ ಭೇಟಿ ನೀಡಿ ಸುಮಾರು 40 ನಿಮಿಷಗಳ ಕಾಲ ಮಾತುಗತೆ ನಡೆಸಿದ್ದಾರೆ. ಇದನ್ನೂ ಓದಿ: ಬಯೋಕಾನ್ ಮುಖ್ಯಸ್ಥೆ ಸಿಎಂ ಭೇಟಿ ಮಾಡಿದ್ಯಾಕೆ?
ಕಿರಣ್ ಮಂಜುದಾರ್ ಬೇಟಿಯ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಡಿಕೆ ಶಿವಕುಮಾರ್ ಅವರು, ಇಂದು ನನ್ನ ನಿವಾಸದಲ್ಲಿ ಉದ್ಯಮಿ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಅವರನ್ನು ಭೇಟಿಯಾಗಿದ್ದು ಸಂತೋಷವಾಯಿತು. ಬೆಂಗಳೂರಿನ ಬೆಳವಣಿಗೆ, ನಾವೀನ್ಯತೆ ಮತ್ತು ಕರ್ನಾಟಕದ ಬೆಳವಣಿಗೆಯ ಕಥೆಯ ಮುಂದಿನ ಹಾದಿಯ ಕುರಿತು ನಾವು ಉತ್ತಮ ಚರ್ಚೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
