Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚಿಕ್ಕಪೇಟೆಯ ಆಧುನೀಕರಣಕ್ಕೆ ಚಾಲನೆ ನೀಡಿದ ಸಿಎಂ
  • Bangalore
  • Politics
  • State

ಚಿಕ್ಕಪೇಟೆಯ ಆಧುನೀಕರಣಕ್ಕೆ ಚಾಲನೆ ನೀಡಿದ ಸಿಎಂ

Praja Vahini October 21, 2025 1 minute read
WhatsApp Image 2025-10-21 at 15.07.12
Spread the love

ಬೆಂಗಳೂರು: ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕೆಂಪೇಗೌಡರ ಕಾಲದಲ್ಲಿ ಪೇಟೆ ಬೀದಿಯಾಗಿದ್ದ ಇಲ್ಲಿನ‌ ಪೇಟೆಗಳು ಈಗಲೂ ಆ ಕಾಲದ ಸ್ವಭಾವವನ್ನೇ ಹೊಂದಿವೆ. ನಾವೊಮ್ಮೆ ಇಲ್ಲಿನ ರಸ್ತೆಗಳ ಅಗಲೀಕರಣದ ಬಗ್ಗೆ ಚಿಂತಿಸಿದ್ದೆವು. ಆದರೆ ದಿನೇಶ್ ಗುಂಡೂರಾವ್ ಅವರು ಒಪ್ಪಲಿಲ್ಲ. ನಮ್ಮ ಜನಗಳಿಗೆ ಸಮಸ್ಯೆ ಆಗತ್ತೆ ಸರ್ ಎಂದು ಸ್ಪಷ್ಟವಾಗಿ ನಿರಾಕರಿಸಿ, ರಸ್ತೆ ಅಗಲೀಕರಣ ಮಾಡದೆ, ರಸ್ತೆಗಳ ಆಧುನೀಕರಣ ಮತ್ತು ಚಿಕ್ಕಪೇಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ಈ ನಗರದ ಜನಸಂಖ್ಯೆ ಹೆಚ್ಚುತ್ತಿದ್ದು ಈ ಸವಾಲಿನ ಜೊತೆಗೇ ಬೆಂಗಳೂರಿನ‌ ರಸ್ತಡಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ ಎಂದರು.

ಬೆಂಗಳೂರಿನ ಮೆಟ್ರೋಗೆ ಶೇ87 ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ87 ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳ್ತಾರೆ ಎಂದರು.

GST ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ. 8 ವರ್ಷ ಸುಲಿಗೆ ಮಾಡಿ ಈಗ ಮೋದಿ ಫೋಟೋ ಹಾಕಿ “ದೀಪಾವಳಿ ಗಿಫ್ಟ್” ಎಂದು ನಾಚಿಕೆ ಇಲ್ಲದೆ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಇಂಥಾ ನಕಲಿಗಳಿಗೆ ನೀವು ಓಟು ಹಾಕಿ ಈಗ ಏಕೆ ತಲೆ ಮೇಲೆ ಕೈ ಹೊತ್ತುಕೊಳ್ತೀರಿ ಎಂದು ಸಾರ್ವಜನಿಕರಿಗೆ ಪ್ರಶ್ನಿಸಿದರು. ಇದನ್ನೂ ಓದಿ:  ಬಯೋಕಾನ್ ಮುಖ್ಯಸ್ಥೆ ಭೇಟಿ ಮಾಡಿದ ಕುರಿತು ಡಿಕೆಶಿ ಹೇಳಿದ್ದೇನೆ?

“ದೀಪಾವಳಿ ಗಿಫ್ಟ್” ಎಂದು ಜಾಹಿರಾತು ನೀಡಿರುವ ಮೋದಿ ಸರ್ಕಾರದ. GST ಬದಲಾವಣೆಯಿಂದ ರಾಜ್ಯಕ್ಕೆ, ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಲೆಕ್ಕ ಬಿಚ್ಚಿಟ್ಟರು.

ಒಂದು ಲಕ್ಷದ 20 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಮುಂದಾಗಿದ್ದೀವಿ. ಕೇಂದ್ರದಿಂದ ನಯ ಪೈಸೆ ಕೊಡುತ್ತಿಲ್ಲ ಎಂದು ವಿವರಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಹೊಸ ರಸ್ತೆ ನಿರ್ಮಿಸಲಿಲ್ಲ. ಒಂದೇ ಒಂದು ರಸ್ತೆ ಗುಂಡಿ ಮುಚ್ಚಲಿಲ್ಲ. ಈಗ ಇರುವ ರಸ್ತೆಗಳೆಲ್ಲಾ ಕಾಂಗ್ರೆಸ್ ಸರ್ಕಾರದ ಕಾಲದಲ್ಲೇ ಆಗಿರುವಂಥವು ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಬಯೋಕಾನ್ ಮುಖ್ಯಸ್ಥೆ ಭೇಟಿ ಮಾಡಿದ ಕುರಿತು ಡಿಕೆಶಿ ಹೇಳಿದ್ದೇನೆ?
Next: ಮಹತ್ವದ ಮೈಲುಗಲ್ಲು ನಿರ್ಮಿಸಿದ ನಂದಿನಿ ಬ್ರಾಂಡ್‌

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.