Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಸಿಹಿ ಸುದ್ದಿ
  • Bangalore
  • State

ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಸಿಹಿ ಸುದ್ದಿ

Praja Vahini October 22, 2025 1 minute read
WhatsApp Image 2025-10-22 at 11.28.16
Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಸಿಹಿ ಸುದ್ದಿ ಒಂದು ಹೊರ ಬಿದ್ದಿದ್ದು, ಗ್ರಾಮೀಣ ಭಾಗದ ಜನತೆಗೆ ಬಹುದೊಡ್ಡ ಅನುಕೂಲವಾಗುವಂತೆ, ಇ-ಸ್ವತ್ತು ವಿತರಣೆಗಾಗಿ ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ಕ್ಕೆ ತಿದ್ದುಪಡಿ ತರಲಾಗಿದೆ.

ಈ ಹೊಸ ಕ್ರಮದಂತೆ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇರುವ ಆಸ್ತಿಗಳಿಗೆ ಇ-ಸ್ವತ್ತು ಪ್ರಮಾಣಪತ್ರಗಳನ್ನು ವೈಜ್ಞಾನಿಕವಾಗಿ, ಪಾರದರ್ಶಕವಾಗಿ ಮತ್ತು ವೇಗವಾಗಿ ವಿತರಿಸಲಾಗುವುದು. ಈ ತಿದ್ದುಪಡಿ ಕ್ರಮದಿಂದ ರಾಜ್ಯದಲ್ಲಿ ಸುಮಾರು 95.75 ಲಕ್ಷ ಆಸ್ತಿಗಳಿಗೆ ಪ್ರಮಾಣಪತ್ರ ನೀಡುವ ಅವಕಾಶ ದೊರಕಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇದನ್ನೂ ಓದಿ:  ಬಿಜೆಪಿ ಸಂಸದರ ಕೊಡುಗೆ ರಾಜ್ಯಕ್ಕೆ ಶೂನ್ಯ

ಬದಲಾವಣೆಯ ಪ್ರಮುಖ ಅಂಶಗಳು

ಇ-ಸ್ವತ್ತು ವಿತರಣೆಗಾಗಿಯಿರುವ ಕಾಲಾವಧಿ ಈಗ 15 ದಿನಕ್ಕೆ ಸೀಮಿತ.

ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಅನುಮೋದನೆ ನೀಡದಿದ್ದರೆ, ಸ್ವಯಂಚಾಲಿತ ಅನುಮೋದನೆ ಪ್ರಕ್ರಿಯೆ ಜಾರಿಗೊಳ್ಳುತ್ತದೆ.

ಆಸ್ತಿಗಳ ಕರಡು ಪ್ರತಿ ಸಾರ್ವಜನಿಕರ ತಪಾಸಣೆಗೆ ತಂತ್ರಾಂಶದ ಮೂಲಕ ಲಭ್ಯವಾಗಲಿದೆ.

ತೆರಿಗೆ ಲೆಕ್ಕಾಚಾರದ ವಿಧಾನವನ್ನು ಸರಳೀಕರಣಗೊಳಿಸಲಾಗಿದೆ.

ಹೊಸ ನಿಯಮಗಳ ಮೂಲಕ ಪರವಾನಗಿ, NOC, ತೆರಿಗೆಗಳು, ದರಗಳು ಮತ್ತು ಶುಲ್ಕಗಳನ್ನು ವೈಜ್ಞಾನಿಕವಾಗಿ ನಿಗದಿಪಡಿಸಲಾಗಿದೆ.

2025-26ನೇ ಸಾಲಿನ ಬಜೆಟ್ ಘೋಷಣೆಗೂ ಅನುಗುಣವಾಗಿ, ಇ-ಸ್ವತ್ತು ಅಭಿಯಾನವನ್ನು ರಾಜ್ಯಾದ್ಯಂತ ಬಲವಾಗಿ ಅನುಷ್ಟಾನಗೊಳಿಸಲಾಗುತ್ತಿದೆ. ಇದರಿಂದ ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲಗಳು ಹೆಚ್ಚಾಗಿ, ಅಭಿವೃದ್ಧಿ ಯೋಜನೆಗಳ ನಿರ್ವಹಣೆಯಲ್ಲಿ ಸಹಕಾರವಾಗಲಿದೆ.

ಈ ಕ್ರಮದಿಂದ ಗ್ರಾಮೀಣ ಜನತೆಗೆ ಸಮರ್ಪಕ ಮತ್ತು ಸಮಯೋಚಿತ ಸೇವೆಗಳು ಲಭಿಸುವಂತಾಗಿದ್ದು, ಗ್ರಾಮ ಪಂಚಾಯತಿಗಳನ್ನು ಸ್ವಾಯತ್ತತೆಯ ದಿಕ್ಕಿನಲ್ಲಿ ಮುಂದೂಡಲು ಈ ತಿದ್ದುಪಡಿ ಮಹತ್ವದ ಹೆಜ್ಜೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಬಿಜೆಪಿ ಸಂಸದರ ಕೊಡುಗೆ ರಾಜ್ಯಕ್ಕೆ ಶೂನ್ಯ
Next: ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.