ಬೆಂಗಳೂರು: ಇಂದು ದೀಪಾವಳಿಯ ಬಲಿಪಾಡ್ಯಮಿಯ ದಿನವಾಗಿದ್ದು ಎಲ್ಲಾ ಸಿನಿಮಾ ತಾರೆಯರು ಸೇರಿದಂತೆ ರಾಜಕೀಯ ರಂಗದವರು ಕೂಡ ಹಲವು ಶಕ್ತಿ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ.
ಹೌದು, ದೀಪಾವಳಿ ಹಬ್ಬದ ಪ್ರಯುಕ್ತ ಮೋಹಕ ತಾರೆ ರಮ್ಯಾ ಅವರು ಇಂದು ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ
ಇನ್ನು ನಟಿ ರಮ್ಯಾ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ನಟಿ ರಮ್ಯಾ ಇತ್ತೀಚೆಗೆ ಸಿನಿಮಾ ಇಂಡಸ್ಟ್ರಿಗೆ ಕಮ್ಬ್ಯಾಕ್ ಮಾಡುವ ಬಗ್ಗೆ ಸಾಕಷ್ಟು ಚರ್ಚೆಗಳು ಶುರುವಾಗಿದ್ದವು. ನಿರ್ಮಾಣದ ಜೊತೆಗೆ ನಟನೆ ಮಾಡಲು ಮನಸ್ಸು ಮಾಡಿರುವುದಾಗಿ ಹೇಳಿಕೊಂಡಿದ್ದರು.
