ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕೂಗು ಜೋರಾಗಿ ಕೇಳುತ್ತಿರುವ ಬೆನ್ನೆಲೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರು ಅಚ್ಚರಿ ಹೇಳಿಕೆಯನ್ನು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಗಾಲದಲ್ಲಿದ್ದಾರೆ. ಸತೀಶ್ ಜಾರಕಿಹೊಳಿ ಸಿಎಂ ಆಗ್ತಾರೆ ಎಂದು ಹೇಳಿದ್ದಾರೆ.
ಇನ್ನು ಯತೀಂದ್ರ ಅವರು ಹೇಳಿರುವ ಮಾತು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಇದೀಗ ಈ ಕುರಿತು ಗೃಹ ಸಚಿವರು ಜಿ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಇಂದು (ಗುರುವಾರ ಅ. 23) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ಸೈದ್ಧಾಂತಿಕವಾಗಿ ಸತೀಶ್ ಜಾರಕಿಹೊಳಿ ಹೆಸರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ?. ಹಿಂದೆ ಅವರು ಅಹಿಂದ ಚಳುವಳಿಯಲ್ಲಿದ್ರು, ಅವರಿಗೆ ಆ ಬದ್ಧತೆ ಇದೆ ಅಂತ ಹೇಳಿರಬಹುದು. ಸಿಎಂ ಹುದ್ದೆಯನ್ನು ದೃಷ್ಟಿಯಲ್ಲಿ ಇಟ್ಕೊಂಡು ಅವರು ಹೇಳಿಲ್ಲ ಎಂದರು. ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಹೆಚ್ಡಿಕೆ ಹೇಳಿದ್ದೇನೆ?
ಇನ್ನೂ ಸಿಎಂ ರೇಸ್ ನಲ್ಲಿ ತಮ್ಮ ಹೆಸರಿರುವ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಮಾತನಾಡಿದ್ದು, ಯಾವುದಾದರೂ ರೇಸ್ ಇರಲಿ, ಹೈಕಮಾಂಡ್ ನಿರ್ಧಾರ ಅಂತಿಮ ಎಂದು ಹೇಳಿದರು.
