Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ದಾಖಲೆ ಬರೆದ KSDL
  • Bangalore
  • Politics
  • State

ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ದಾಖಲೆ ಬರೆದ KSDL

Praja Vahini October 24, 2025 1 minute read
WhatsApp Image 2025-10-24 at 16.17.25
Spread the love

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಟ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು (ಶುಕ್ರವಾರ ಅಕ್ಟೋಬರ್ 24) ರಂದು ಸಭೆ ನಡೆದಿದ್ದು, ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು.

ಸಚಿವ ಎಂ.ಬಿ.ಪಾಟೀಲ್ ಅವರು ಮಾತನಾಡಿ, ಕೆಎಸ್ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.

2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಅವರು ನುಡಿದಿದ್ದಾರೆ. ಇದನ್ನೂ ಓದಿ: KSDL ನಿಂದ ಐತಿಹಾಸಿಕ ಸಾಧನೆ

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: KSDL ನಿಂದ ಐತಿಹಾಸಿಕ ಸಾಧನೆ
Next: ಇಂದು ನಡೆದ ಮಹತ್ವದ ಸಭೆಯಲ್ಲಿ ಸಿಎಂ ಸಚಿವರಿಗೆ ನೀಡಿದ ಮಹತ್ವದ ಸೂಚನೆಗಳೇನು?

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.