ಬೆಂಗಳೂರು: ಬೆಂಗಳೂರು ನಗರದಲ್ಲಿ ಇತ್ತೀಚಿಗೆ ಸಿಲಿಂಡರ್ ಸ್ಫೋಟಕಗಳು ಹೆಚ್ಚಾಗಿ ಕಂಡುಬರುತ್ತಿರುವ ಬೆನ್ನಲ್ಲೇ ಮತ್ತೆ ಇದೀಗ ಕೆ ಆರ್ ಪುರಂ ತ್ರಿವೇಣಿ ನಗರದಲ್ಲಿ ಭೀಕರ ಸಿಲಿಂಡರ್ ಸ್ಪೋಟಕ್ಕೆ ಒಬ್ಬ ವೃದ್ಧ ಸಾವನ್ನಪ್ಪಿದ್ದು ಬೃಹತ್ ಕಟ್ಟಡವೇ ನೆಲಸಮವಾಗಿದೆ.
ಬೆಳಗ್ಗೆ 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಸ್ಫೋಟದ ತೀವ್ರತೆಗೆ ಭಾರೀ ಕಟ್ಟಡವೇ ನೆಲಸಮ ಆಗಿದೆ. ಅಕ್ಕಪಕ್ಕದ ಮನೆಗಳ ಕಿಟಕಿಗಳು ಹಾನಿಯಾಗಿದೆ. ಈ ವೇಳೆ ಮನೆಯಲ್ಲಿದ್ದ ಓರ್ವ ಸಾವನ್ನಪ್ಪಿದ್ದು, 3 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಭರತ್ ನಗರದಲ್ಲಿ ಡಿಕೆಶಿ ಬೆಂಗಳೂರು ನಡಿಗೆ
ಇನ್ನು ಘಟನಾ ಸ್ಥಳಕ್ಕೆ ಕೆ.ಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ಅಧಿಕಾರಿಗಳಿಂದಲೂ ಸ್ಥಳ ಪರಿಶೀಲನೆ ನಡೆಯುತ್ತಿದೆ. ಸ್ಫೋಟಕ್ಕೆ ಕಾರಣ ಏನೆಂಬುದು ಇನ್ನಷ್ಟೇ ತಿಳಿಯಬೇಕಿದೆ.
