Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪುನೀತ್ ಹಾಗೂ ಅಶ್ವಿನಿ ಅವರನ್ನು ರಾಜಕೀಯಕ್ಕೆ ತರಲು ಪ್ರಯತ್ನಿಸಿದ್ದೆ, ಆದರೆ ಅವರು ಬರಲಿಲ್ಲ: ಡಿಸಿಎಂ
  • Bangalore
  • Cinema
  • Front news
  • ಬೆಂಗಳೂರು ನಗರ

ಪುನೀತ್ ಹಾಗೂ ಅಶ್ವಿನಿ ಅವರನ್ನು ರಾಜಕೀಯಕ್ಕೆ ತರಲು ಪ್ರಯತ್ನಿಸಿದ್ದೆ, ಆದರೆ ಅವರು ಬರಲಿಲ್ಲ: ಡಿಸಿಎಂ

Praja Vahini October 26, 2025 1 minute read
WhatsApp Image 2025-10-26 at 12.00.28 PM
Spread the love

ಬೆಂಗಳೂರು: “ರಾಜಕಾರಣಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸೆಳೆಯಲು ನಾನು ಅನೇಕ ಬಾರಿ ಪ್ರಯುತ್ನ ಪಟ್ಟೆ, ಚಾಕಲೇಟ್ ಕೊಟ್ಟೆ. ಆದರೆ ಅವರು ಬರಲಿಲ್ಲ. ಸಹೋದರಿ ಅಶ್ವಿನಿ ಅವರನ್ನು ಸಹ ಆಹ್ವಾನಿಸಿದೆ. ಅವರು ಸಹ ತಮ್ಮ ಪತಿ ಹಾದಿಯಲ್ಲೇ ನಡೆಯುವುದಾಗಿ ತಿಳಿಸಿದರು, ರಾಜಕಾರಣಕ್ಕೆ ಬರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ್ ಅವರ ಜೀವನಾಧಾರಿತ ಎಐ ತಂತ್ರಜ್ಞಾನ ಬಳಸಿ ಮಾಡಿರುವ ‘ಕನ್ನಡದ ಅಪ್ಪು’ ಮೊಬೈಲ್ ಆ್ಯಪ್ ಅನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬಿಡುಗಡೆಗೊಳಿಸಿ, ಮಾತನಾಡಿದರು.

“ಅಶ್ವಿನಿ ಅವರು ರಾಜಕೀಯಕ್ಕೆ ಬರಲು ತಿರಸ್ಕರಿಸಿದಾಗ. ಸಕ್ರಿಯ ರಾಜಕಾರಣಕ್ಕೆ ಬರುವುದು ಬೇಡ ಆದರೆ ಮುಖ್ಯವಾಹಿನಿಯಲ್ಲಿರಿ ಎಂದು ತಿಳಿಸಿದ್ದೆ. ಇಷ್ಟು ದಿನ ಇದನ್ನು ಬಹಿರಂಗ ಗೊಳಿಸಿರಲಿಲ್ಲ. ಇಂದು ಬಹಿರಂಗಗೊಳಿಸಿದ್ದೇನೆ” ಎಂದರು.

ತಂತ್ರಜ್ಞಾನದ ಮೂಲಕ ಪುನೀತ್ ಕೆಲಸಗಳು ಜೀವಂತ:

“ರಾಮಾಯಣ ಮತ್ತು ಮಹಾಭಾರತಗಳು ಅನೇಕ ವರ್ಷಗಳಿಂದ ನಮ್ಮ ನಡುವೆ ಉಳಿದುಕೊಂಡಿವೆ. ಪುನೀತ್ ರಾಜಕುಮಾರ್ ಅವರು ಮಾಡಿರುವ ಕೆಲಸಗಳು ಹೊಸ ತಂತ್ರಜ್ಞಾನದ ಮೂಲಕ ನಮ್ಮ ನಡುವೆ ಜೀವಂತವಾಗಿರುತ್ತವೆ” ಎಂದು ತಿಳಿಸಿದರು.

“ಎಐ‌ ತಂತ್ರಜ್ಞಾನದ ಮೂಲಕ ಭೀಮ, ಅರ್ಜುನ, ರಾಮ ಹೀಗೆ ಅನೇಕ ಪಾತ್ರಗಳನ್ನು ನೈಜತೆಗೆ ಹತ್ತಿರವಾದಂತೆ ಚಿತ್ರಿಸಲಾಗುತ್ತಿದೆ. ಅದೇ ರೀತಿ ಈ ಆ್ಯಪ್ ನಲ್ಲಿ ಬಾಲ್ಯಕಾಲದ ಪುನೀತ್‌‌ ಸೇರಿದಂತೆ ಇತ್ತೀಚಿನ ದಿನದವರೆಗಿನ ತನಕ ಸೃಷ್ಟಿಸಲಾಗಿದೆ. ಪುನೀತ್ ಅವರು ಕೊನೆಯುಸಿರು ಎಳೆದ ಸಂದರ್ಭದಲ್ಲಿ ಎಷ್ಟೊಂದು ಅಭಿಮಾನಿಗಳು ಅವರಿಗಾಗಿ ಮಿಡಿದರು. ನೂರಾರು ಪ್ರತಿಮೆಗಳನ್ನು ಸ್ಥಾಪಿಸಿದ್ದಾರೆ. ಅವರ ಹೆಸರನ್ನು ತಮ್ಮ ಮಕ್ಕಳಿಗೆ ಇಟ್ಟಿದ್ದಾರೆ. ಕತ್ತಲೆಗೆ ಹೋಗಿರುವ ಅಪ್ಪು ತಂತ್ರಜ್ಞಾನದ ಮೂಲಕ ಬೆಳಕಿಗೆ ಬಂದಿದ್ದಾರೆ” ಎಂದರು.

“ನನಗೆ ಬಹಳಷ್ಟು ರಾಜ್ಯಗಳ ಸಿನಿಮಾ ಸ್ನೇಹಿತರು ಪರಿಚಯ ಇದ್ದಾರೆ. ಯಾರೂ ಕೂಡ ಈ ಆಲೋಚನೆ ಮಾಡಿಲ್ಲ. ನನ್ನ ಸ್ನೇಹಿತನ ಹೆಸರಿನಲ್ಲಿ ಇಂತಹ ಆ್ಯಪ್ ರೂಪುಗೊಂಡಿದ್ದು, ಅದನ್ನು ಉದ್ಘಾಟನೆ ಮಾಡಲು ನಾನು ಬಂದಿರುವುದು ನನ್ನ ಭಾಗ್ಯ ಎಂದು ಭಾವಿಸುತ್ತೇನೆ” ಎಂದರು.

ಅಪ್ಪು ಮನುಷ್ಯತ್ವಕ್ಕೆ ದೊಡ್ಡ ಉದಾಹರಣೆ:

“ಅಪ್ಪು ಅವರು ಸಮಾಜದಿಂದ ಪಡೆದು ಸಮಾಜಕ್ಕೆ ಹಲವಾರು ಕಾಣಿಕೆಗಳನ್ನು ಕೊಟ್ಟು ಹೋಗಿದ್ದಾರೆ. ತಮ್ಮ ಗುರುತನ್ನು ಬಿಟ್ಟು ಹೋಗಿದ್ದಾರೆ. ದೇವರು ಕೊಟ್ಟಂತಹ ಅವಕಾಶವನ್ನು ಸದುಪಯೋಗ ಮಾಡಿಕೊಂಡಿದ್ದಾರೆ. ಮನುಷ್ಯತ್ವಕ್ಕೆ ದೊಡ್ಡ ‌ಉದಾಹರಣೆಯಾಗಿದ್ದಾರೆ” ಎಂದರು.

“ಸಾವು ಎಂಬುದು ಯಾರ ಕೈಯಲ್ಲಿ ಇಲ್ಲ. ನಾನು ಹಾಗೂ ಪುನೀತ್ ರಾಜಕುಮಾರ್ ಅವರು ನೆರೆಹೊರೆಯವರು. ಇಬ್ಬರೂ ಒಟ್ಟಿಗೆ ಒಂದೇ ಜಿಮ್ ಗೆ ಕಸರತ್ತು ನಡೆಸಲು ಹೋಗುತ್ತಿದ್ದೆವು. ಕೊನೆ ಕ್ಷಣಗಳು ಅವರ ಕೈಯಲ್ಲೂ ಇರಲಿಲ್ಲ. ಅವರ ಜಿಮ್ ತರಬೇತುದಾರ ಹಾಗೂ ನನ್ನ ತರಬೇತುದಾರ ಕೊನೆ ಕ್ಷಣದಲ್ಲಿ ಒಟ್ಟಿಗೆ ಇದ್ದರು. ಅವರು ನನಗೆ ಈ ವಿಚಾರ ತಿಳಿಸಿದರು” ಎಂದರು.

“ಈ ಕಾರ್ಯಕ್ರಮದ ಬಗ್ಗೆ ತಿಳಿದಾಗ ಇದರಲ್ಲಿ ವಿಶೇಷತೆ ಇದೆ ಎಂದು ಕಾರ್ಯಕ್ರಮಕ್ಕೆ ಬರಲು ಒಪ್ಪಿದೆ. ನಾನು ಡಿಸಿಎಂ ಆಗಿ ಈ ಕಾರ್ಯಕ್ರಮಕ್ಕೆ ಬಂದಿಲ್ಲ ಈ ಕುಟುಂಬದ ಸದಸ್ಯನಾಗಿ ಬಂದಿದ್ದೇನೆ ಬಂದಿದ್ದೇನೆ. ಶುಭಂ ಕರೋತಿ ಕಲ್ಯಾಣಂ ಆರೋಗ್ಯ ಧನ ಸಂಪದ, ಜ್ಞಾನ ಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತ. ಎಲ್ಲರಿಗೂ ಶುಭವಾಗಲಿ” ಎಂದರು.

“ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ. ಜನನ ಉಚಿತ, ಮರಣ ಖಚಿತ. ಹುಟ್ಟು ಸಾವಿನ ಮಧ್ಯೆ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ಹೊಸ ಪೀಳಿಗೆಗೆ ಹೊಸ ವಿಚಾರ ತಲುಪಿಸಬೇಕು, ತಾನು ಬೆಳೆದು ಬಂದ ಹಾದಿ ಬಲಿಷ್ಠವಾಗಿ ಬೆಳೆಸಲು ಪುನೀತ್ ಅವರಿಗೆ ದೃಢವಾದ ಸಂಕಲ್ಪ ಇತ್ತು. ಸ್ಯಾಂಡಲ್ ವುಡ್ ಲೋಕದಲ್ಲಿರುವ ಜನರಿಗೆ ಸಿನಿಮಾ ರಂಗದಲ್ಲಿ ಬೆಳೆಯಲು ಆಸಕ್ತಿ ಇರುವವರಿಗೆ ಒಂದು ವೇದಿಕೆಯಾಗಿ ಈ ಆ್ಯಪ್ ರೂಪುಗೊಂಡಿದೆ” ಎಂದರು.

About the Author

Praja Vahini

Editor

View All Posts

Spread the love

Post navigation

Previous: ಆರೋಪಿಗಳಿಗೆ ಸಾಥ್ ನೀಡಿದ್ರಾ ಜಮೀರ್ ಅಹ್ಮದ್..?
Next: ಕುಮಾರಸ್ವಾಮಿ ಖಾಲಿ ಟ್ರಂಕ್: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.