Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ಬದಲಾವಣೆ ಕುರಿತು ಸ್ಫೋಟಕ ಹೇಳಿಕೆ ನೀಡಿದ ಗೃಹ ಸಚಿವರು!
  • Bangalore
  • Politics
  • State

ಸಿಎಂ ಬದಲಾವಣೆ ಕುರಿತು ಸ್ಫೋಟಕ ಹೇಳಿಕೆ ನೀಡಿದ ಗೃಹ ಸಚಿವರು!

Praja Vahini October 28, 2025 1 minute read
WhatsApp Image 2025-10-28 at 17.02.43
Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಡಸಾಲೆಯಲ್ಲಿ ಸಿಎಂ ಬದಲಾವಣೆ ಕೂಗು ಜೋರಾಗಿ ಕೇಳುತ್ತಿದ್ದು, ಒಂದು ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ದಲಿತ ನಾಯಕರು ಸಿಎಂ ಪಟ್ಟ ಅಲಂಕರಿಸಲು ಕಾಯುತ್ತಿದ್ದಾರೆ.

ಒಂದು ಕಡೆ ಸತೀಶ್ ಜಾರಕಿಹೋಳಿ ಸಿಎಂ ಮಾಡಬೇಕೆಂಬ ಕೂಗು ಕೇಳಿ ಬರುತ್ತಿರುವುದರ ಜೊತೆಗೆ ಮತ್ತೊಂದು ಕಡೆ ಡಿಕೆ ಶಿವಕುಮಾರ್ ಅವರು ಕೂಡ ಸಿಎಂ ಪಟ್ಟಕ್ಕೆ ಅರ್ಹರು ಎಂಬ ಕೂಗು ಕೂಡ ಕೇಳಿ ಬರುತ್ತಿದೆ.

ಇದರ ಮಧ್ಯೆ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ್ ಖರ್ಗೆಯವರ ಕೂಡ ಸಿಎಂ ರೇಸಿನಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಈ ಎಲ್ಲದರ ಮಧ್ಯದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಹೌದು, ಸಿಎಂ ಬದಲಾವಣೆ ಕುರಿತಾಗಿ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ಸಿದ್ದು, ಐದು ವರ್ಷಕ್ಕೆ ಸಿದ್ದರಾಮಯ್ಯರೆ ಸಿಎಂ ಅಂತ ಆಯ್ಕೆ ಮಾಡಿದ್ದೇವೆ ಎಂದು ಸ್ಪೋಟಕ ಮಾಹಿತಿಯನ್ನು ಹೊರ ಹಾಕಿದ್ದಾರೆ. ಇದನ್ನೂ ಓದಿ:  ಪೊಲೀಸರು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ: ಸಿ.ಎಂ

ಈ ಕುರಿತು ನಗರದಲ್ಲಿ ಇಂದು (ಮಂಗಳವಾರ ಅಕ್ಟೋಬರ್ 28) ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಸಿಎಲ್‌ಪಿ ಸಭೆಯಲ್ಲಿ ಎಲ್ಲಾ ಶಾಸಕರು ಸೇರಿಕೊಂಡು ಸಿದ್ದರಾಮಯ್ಯ ಅವರನ್ನ 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಆಯ್ಕೆ ಮಾಡುವಾಗ ನಾವು ಯಾವುದೇ ಅವಧಿ ನಿಗದಿ ಮಾಡಿ ಆಯ್ಕೆ ಮಾಡಿಲ್ಲ. ನಮ್ಮ ದೃಷ್ಟಿಯಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಅಂತ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಪೊಲೀಸರು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ: ಸಿ.ಎಂ
Next: ಅಪ್ಪು 4ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಅಭಿಮಾನಿಗಳು

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.