ದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತ್ವದ ಕಾರ್ಯವನ್ನು ಮಾಡುತ್ತಲೇ ಇರುತ್ತಾರೆ ಅದಕ್ಕೆ ಉದಾಹರಣೆ ಎಂಬಂತೆ ಇದೀಗ ಯುದ್ಧ ವಿಮಾನ ಹಾರಿಸಿ ಮತ್ತೊಂದು ದಾಖಲೆ ಬರೆದಿದ್ದಾರೆ.
ಹೌದು, ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ಈ ಮೂಲಕ ರಫೇಲ್ನಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇನ್ನು ಮುರ್ಮು ಅವರು ಯುದ್ಧ ವಿಮಾನದಲ್ಲಿ ನಡೆಸುತ್ತಿರುವ 2ನೇ ಹಾರಾಟ ಇದು. ಭಾರತದ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ 2023ರ ಏಪ್ರಿಲ್ 8 ರಂದು ಅಸ್ಸಾಂನ ತೇಜ್ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್-30 ಎಂಕೆಐ ಜೆಟ್ನಲ್ಲಿ ಮುರ್ಮು ಹಾರಾಟ ನಡೆಸಿದ್ದರು. ಹೀಗೆ ಹಾರಾಟ ನಡೆಸಿದ 3ನೇ ರಾಷ್ಟ್ರಪತಿ ಮತ್ತು 2ನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಂಡರು. ಇದನ್ನೂ ಓದಿ: ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ರಾಜ್ ಕುಟುಂಬ
ಅಲ್ಲದೆ ಮುರ್ಮು ಅವರಿಗಿಂತ ಮೊದಲು, ಮಾಜಿ ರಾಷ್ಟ್ರಪತಿಗಳಾದ ಎಪಿಜೆ ಅಬ್ದುಲ್ ಕಲಾಂ ಮತ್ತು ಪ್ರತಿಭಾ ಪಾಟೀಲ್ ಅವರು ಪುಣೆ ಬಳಿಯ ಲೋಹೆಗಾಂವ್ನಲ್ಲಿ ಸುಖೋಯ್-30 ಎಂಕೆಐನಲ್ಲಿ ಹಾರಾಟ ನಡೆಸಿದ್ದರು. ಫ್ರೆಂಚ್ ಏರೋಸ್ಪೇಸ್ ದೈತ್ಯ ಡಸಾಲ್ಟ್ ಏವಿಯೇಷನ್ ತಯಾರಿಸಿದ ರಫೇಲ್ನಲ್ಲಿ ಭಾರತದ ರಾಷ್ಟ್ರಪತಿಯೊಬ್ಬರು ಹಾರಾಟ ನಡೆಸಿದ್ದು ಇದೇ ಮೊದಲು.
